Kalki 2898 – AD: ‘ಕಲ್ಕಿ’ ಅವತಾರದಲ್ಲಿ ಪ್ರಭಾಸ್ ಎಂಟ್ರಿ; ಮಿಂಚಿದ ಅಮಿತಾಭ್, ದೀಪಿಕಾ
‘ಪ್ರಾಜೆಕ್ಟ್ ಕೆ’ ಚಿತ್ರದಲ್ಲಿ ಪ್ರಭಾಸ್ ಅವರು ಕಲ್ಕಿ ಅವತಾರ ತಾಳಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಸೂಪರ್ ಹೀರೋ ಮಾದರಿಯ ಪಾತ್ರಗಳು ಕಾಣಿಸಿವೆ.
Updated on:Jul 21, 2023 | 8:59 AM

‘ಪ್ರಾಜೆಕ್ಟ್ ಕೆ’ ಚಿತ್ರದ ಶೀರ್ಷಿಕೆ ಬದಲಿಸಲಾಗಿದೆ. ‘ಕಲ್ಕಿ 2898 ಎಡಿ’ ಎನ್ನುವ ಟೈಟಲ್ ಇಡಲಾಗಿದೆ. ಇಂದು ರಿಲೀಸ್ ಮಾಡಿರುವ ಮೊದಲ ಗ್ಲಿಂಪ್ಸ್ ಗಮನ ಸೆಳೆದಿದೆ.

‘ಪ್ರಾಜೆಕ್ಟ್ ಕೆ’ ಚಿತ್ರದಲ್ಲಿ ಪ್ರಭಾಸ್ ಅವರು ಕಲ್ಕಿ ಅವತಾರ ತಾಳಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಸೂಪರ್ ಹೀರೋ ಮಾದರಿಯ ಪಾತ್ರಗಳು ಕಾಣಿಸಿವೆ.

ದೀಪಿಕಾ ಪಡುಕೋಣೆ ಅವರು ಕೂಡ ‘ಕಲ್ಕಿ 2898-ಎಡಿ’ ಚಿತ್ರದಲ್ಲಿದ್ದಾರೆ. ಅವರ ಪಾತ್ರ ಕೂಡ ಇಲ್ಲಿ ಕಾಣಿಸಿದೆ.

ಅಮಿತಾಭ್ ಬಚ್ಚನ್ ಅವರ ಮುಖವನ್ನು ಮಾತ್ರ ತೋರಿಸಲಾಗಿದೆ. ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ನಾಗ್ ಅಶ್ವಿನ್ ಅವರ ನಿರ್ದೇಶನದ ಬಗ್ಗೆ ಭರವಸೆ ಇದೆ. ಈ ಭರವಸೆ ಹೆಚ್ಚಿಸುವ ರೀತಿಯಲ್ಲಿ ‘ಕಲ್ಕಿ 2898-ಎಡಿ’ ಚಿತ್ರದ ಫಸ್ಟ್ ಗ್ಲಿಂಪ್ಸ್ ಮೂಡಿ ಬಂದಿದೆ.

ಪ್ರಭಾಸ್, ದೀಪಿಕಾ ಮಾತ್ರವಲ್ಲದೆ ಕಮಲ್ ಹಾಸನ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಮೂಡಿದೆ.

ಪ್ರಭಾಸ್ ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ಅವರಿಗೆ ಈ ಚಿತ್ರದ ಮೂಲಕ ದೊಡ್ಡ ಗೆಲುವು ಸಿಗುವ ನಿರೀಕ್ಷೆ ಇದೆ.

‘ಕಲ್ಕಿ 2898-ಎಡಿ’ ಚಿತ್ರ 2024ರ ದೀಪಾವಳಿಯಲ್ಲಿ ರಿಲೀಸ್ ಆಗಲಿದೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

Published On - 8:16 am, Fri, 21 July 23

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



