AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಒಲಿಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಪಿಟಿ ಉಷಾ..!

PT Usha: ಅಧ್ಯಕ್ಷ ಸ್ಥಾನಕ್ಕೆ ಉಷಾ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಕಳೆದ ತಿಂಗಳು ಉನ್ನತ ಹುದ್ದೆಗೆ ಉಷಾ ಅವರ ಆಯ್ಕೆಯನ್ನು ಅಂತಿಮಗೊಳಿಸಲಾಗಿತ್ತು.

TV9 Web
| Updated By: ಪೃಥ್ವಿಶಂಕರ|

Updated on: Dec 11, 2022 | 12:50 PM

Share
ಭಾರತೀಯ ಕ್ರೀಡಾ ಆಡಳಿತದಲ್ಲಿ ಹೊಸ ಯುಗಕ್ಕೆ ನಾಂದಿ ಹಾಡಿರುವ ಭಾರತೀಯ ಒಲಿಂಪಿಕ್ ಸಂಸ್ಥೆ, ತನ್ನ (ಐಒಎ) ಮೊದಲ ಮಹಿಳಾ ಅಧ್ಯಕ್ಷರಾಗಿ ಹಿರಿಯ ಅಥ್ಲೀಟ್ ಪಿಟಿ ಉಷಾ ಅವರನ್ನು ಆಯ್ಕೆ ಮಾಡಿಕೊಂಡಿದೆ. ರನ್ನಿಂಗ್ ರೇಸ್​ನಲ್ಲಿ ಭಾರತದ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಹೆಚ್ಚಿಸಿದ್ದ ಉಷಾ ಅವರು, ಏಷ್ಯನ್ ಗೇಮ್ಸ್‌ನಲ್ಲಿ ಅನೇಕ ಪದಕಗಳನ್ನು ಗೆದಿದ್ದರು. ಹಾಗೆಯೇ 1984 ಲಾಸ್ ಏಂಜಲೀಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ 400 ಮೀಟರ್ ಹರ್ಡಲ್ಸ್‌ನಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರು.

1 / 5
ಸುಪ್ರೀಂ ಕೋರ್ಟ್‌ನಿಂದ ನೇಮಕಗೊಂಡ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನಾಗೇಶ್ವರ ರಾವ್ ಅವರ ಮೇಲ್ವಿಚಾರಣೆಯಲ್ಲಿ ನಡೆದ ಈ ಚುನಾವಣೆಯಲ್ಲಿ ಉಷಾ ಅವರಿಗೆ ಪ್ರತಿ ಸ್ಪರ್ಧಿಯೇ ಇರಲಿಲ್ಲ. ಹೀಗಾಗಿ ಉಷಾ ಅವರು ಅವಿರೋಧವಾಗಿ ಈ ಸ್ಥಾನಕ್ಕೆ ಆಯ್ಕೆಯಾದರು. ಉಷಾ ಅಧ್ಯಕ್ಷೆಯಾಗಿ ಆಯ್ಕೆಯಾಗುವ ಮೂಲಕ ಐಒಎಯಲ್ಲೂ ಬಣ ರಾಜಕೀಯದಿಂದ ಉದ್ಭವಿಸಿದ್ದ ಬಿಕ್ಕಟ್ಟು ಅಂತ್ಯಗೊಂಡಿದೆ. ವಾಸ್ತವವಾಗಿ, ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಈ ತಿಂಗಳು ಐಒಎ ಚುನಾವಣೆ ನಡೆಸದಿದ್ದರೆ, ಸಂಸ್ಥೆಯನ್ನು ಅಮಾನತು ಮಾಡುವುದಾಗಿ ಬೆದರಿಕೆ ಹಾಕಿತ್ತು.

2 / 5
ಅಧ್ಯಕ್ಷ ಸ್ಥಾನಕ್ಕೆ ಉಷಾ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಕಳೆದ ತಿಂಗಳು ಉನ್ನತ ಹುದ್ದೆಗೆ ಉಷಾ ಅವರ ಆಯ್ಕೆಯನ್ನು ಅಂತಿಮಗೊಳಿಸಲಾಗಿತ್ತು. ಜುಲೈನಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಉಷಾ ಅವರನ್ನು ಈ ಸ್ಥಾನಕ್ಕೆ ಆಯ್ಕೆ ಮಾಡುವಲ್ಲಿ ಯಾರೂ ವಿರೋಧಿಸದಿರುವುದು ಆಯ್ಕೆ ಪ್ರಕ್ರಿಯೆ ಸುಲಭವಾಗಿ ಮುಕ್ತಾಯಗೊಳ್ಳುವಂತೆ ಮಾಡಿತು.

3 / 5
95 ವರ್ಷಗಳ ಐಒಎ ಇತಿಹಾಸದಲ್ಲಿ ಅಧ್ಯಕ್ಷರಾದ ಮೊದಲ ಒಲಿಂಪಿಯನ್ ಮತ್ತು ಮೊದಲ ಅಂತರರಾಷ್ಟ್ರೀಯ ಪದಕ ವಿಜೇತ ಕ್ರೀಡಾಪಟು ಎಂಬ ಖ್ಯಾತಿಗೆ ಉಷಾ ಭಾಜನರಾಗಿದ್ದಾರೆ. ಇದರೊಂದಿಗೆ ಅವರ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾದ್ದಂತ್ತಾಗಿದೆ.

4 / 5
ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವುದರೊಂದಿಗೆ, ಮಹಾರಾಜ ಯದ್ವೇಂದ್ರ ಸಿಂಗ್ ನಂತರ ಐಒಎ ಮುಖ್ಯಸ್ಥರಾದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಉಷಾ ಪಾತ್ರರಾಗಿದ್ದಾರೆ. 1934 ರಲ್ಲಿ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ಯದ್ವೇಂದ್ರ ಸಿಂಗ್ ಅವರು 1938 ರಿಂದ 1960 ರವರೆಗೆ ಐಒಎ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದರು.

5 / 5
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ

Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ

ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ

Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ

ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?

ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು