- Kannada News Photo gallery Pulwama Attack: Madikeri girl tribute Pulwama Attack shahid soldiers in different way
Pulwama Attack: ಪುಲ್ವಾಮಾದಲ್ಲಿ ಹುತಾತ್ಮರಿಗೆ ವಿಶಿಷ್ಟ ರೀತಿ ಶ್ರದ್ಧಾಂಜಲಿ, ಮಡಿಕೇರಿಯಲ್ಲಿ ಗಮನ ಸೆಳೆದ ಬಾಲಕಿ
2019ರ ಫೆಬ್ರವರಿ 14 ರಂದು ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತ್ಮಾರಾದರು. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಮಡಿಕೇರಿಯಲ್ಲಿ ವಿಶಿಷ್ಟ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.
Updated on:Feb 14, 2024 | 3:30 PM

2019ರ ಫೆಬ್ರವರಿ 14 ರಂದು ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತ್ಮಾರಾದರು.

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಮಡಿಕೇರಿಯಲ್ಲಿ ವಿಶಿಷ್ಟ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.

ಸುಂಟಿಕೊಪ್ಪ ಗ್ರಾಮದ ಬಾಲಕಿ ಶ್ರೀಶಾ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿರುವ ಬಸ್ ನಿಲ್ದಾಣಕ್ಕೆ ಸುಣ್ಣ-ಬಣ್ಣ ಬಳಿದು ಹುತಾತ್ಮರಾದ ವೀರ ಯೋಧರ ಭಾವಚಿತ್ರಗಳನ್ನು ಗೋಡೆ ಮೇಲೆ ಅಂಟಿಸಿ "ಮತ್ತೆ ಹುಟ್ಟಿ ಬನ್ನಿ ವೀರ ಯೋಧರೆ" ಎಂಬ ಸಾಲುಗಳನ್ನು ಬರೆದಿದ್ದಾರೆ.

ಶ್ರೀಶಾ ಸೇನಾ ಧಿರಿಸಿನಲ್ಲಿ ಯೋಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಶ್ರೀಶಾರಿಗೆ ಅವರ ಪೋಷಕರು ಮತ್ತು ಸ್ನೇಹಿತರು ಸಾತ್ ನೀಡಿದರು. ಅಲ್ಲದೆ ಸಾರ್ವಜನಿಕರು ಕೂಡ ಯೋಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.

ಚಿಕ್ಕಂದಿನಿಂದಲೇ ಸೇನೆಯ ಬಗ್ಗೆ ವಿಶೇಷ ಗೌರವ, ಅಭಿಮಾನ ಇರಿಸಿಕೊಂಡಿರುವ ಶ್ರೀಶಾ ಪ್ರತಿವರ್ಷ ಹುತಾತ್ಮ ಯೋಧರಿಗೆ ವಿಶಿಷ್ಟ ರೀತಿಯಲ್ಲಿ ಗೌರವ ಸಲ್ಲಿಸುತ್ತಾ ಬಂದಿದ್ದಾರೆ.

2019ರ ಫೆ.14ರಂದು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೈಶ್-ಎ-ಮೊಹಮ್ಮದ್ (ಜಿಐಎಂ) ಉಗ್ರ ಅದಿಲ್ ಅಹ್ಮದ್ ದಾರ್ ಸುಧಾರಿತ ಸ್ಫೋಟಕ ಸಾಮಗ್ರಿ ತುಂಬಿದ ಕಾರನ್ನು ಸಿಆರ್‌ಪಿಎಫ್ ಯೋಧರನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆಸಿ ತನ್ನನ್ನು ತಾನು ಸ್ಪೋಟಿಸಿಕೊಂಡಿದ್ದ. ಈ ಭೀಕರ ಸ್ಪೋಟದಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾದಾರು.

70 ಆರ್ಮಿ ಟ್ರಕ್ಗಳಲ್ಲಿ 2500 ಸಿಆರ್‌ಪಿಎಫ್ ಯೋಧರು ಪ್ರಯಾಣಿಸುತ್ತಿದ್ದರು.

Pulwama Attack: Madikeri girl tribute Pulwama Attack shahid soldiers in different way
Published On - 3:05 pm, Wed, 14 February 24



