Rashmika Mandanna: ಗ್ಲಾಮರಸ್​ ಆಗಿ ಫೋಟೋಶೂಟ್​ ಮಾಡಿಸಿದ ರಶ್ಮಿಕಾ ಮಂದಣ್ಣ; ‘ನಿಮ್ಮ ನಗು ಕ್ಯೂಟ್​’ ಎಂದ ಫ್ಯಾನ್ಸ್​

Updated on: Apr 28, 2023 | 10:41 AM

Rashmika Mandanna Photos: ‘ಪುಷ್ಪ 2’ ಶೂಟಿಂಗ್​ ನಡುವೆಯೂ ರಶ್ಮಿಕಾ ಮಂದಣ್ಣ ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ಇದು ಅಭಿಮಾನಿಗಳಿಗೆ ಇಷ್ಟವಾಗಿದೆ.

1 / 5
ನಟಿ ರಶ್ಮಿಕಾ ಮಂದಣ್ಣ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಅವರು ಹೊಸ ಫೋಟೋಶೂಟ್​ ಮೂಲಕವೂ ಕಂಗೊಳಿಸಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಅವರು ಹೊಸ ಫೋಟೋಶೂಟ್​ ಮೂಲಕವೂ ಕಂಗೊಳಿಸಿದ್ದಾರೆ.

2 / 5

ಈಗ ರಶ್ಮಿಕಾ ಮಂದಣ್ಣ ಅವರು ಗ್ಲಾಮರಸ್​ ಆಗಿ ಪೋಸ್​ ನೀಡಿದ್ದಾರೆ. ಅವರ ಈ ಹೊಸ ಫೋಟೋಗಳು ವೈರಲ್​ ಆಗಿವೆ. ಇದನ್ನು ನೋಡಿ ‘ನಿಮ್ಮ ನಗು ಕ್ಯೂಟ್​’ ಎಂದಿದ್ದಾರೆ ಫ್ಯಾನ್ಸ್​.

3 / 5

ಬಹುಭಾಷೆಯಲ್ಲಿ ರಶ್ಮಿಕಾ ಮಂದಣ್ಣ ಫೇಮಸ್​. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಫ್ಯಾನ್ಸ್​ ಸಲುವಾಗಿ ಅವರು ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ.

4 / 5

ಅನೇಕ ಸ್ಟಾರ್​ ನಟರಿಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚಾಗುತ್ತಿದೆ. ಪ್ರಸ್ತುತ ಅವರು ಅಲ್ಲು ಅರ್ಜುನ್​ ಜೊತೆ ‘ಪುಷ್ಪ 2’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

5 / 5

ರಶ್ಮಿಕಾ ಮಂದಣ್ಣ ಅವರಿಗೆ ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಕಾಟ ತಪ್ಪಿದ್ದಲ್ಲ. ಹಾಗಂತ ಅದರ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಬದಲಿಗೆ, ಕೆಲಸಗಳ ಮೇಲೆ ಗಮನ ಹರಿಸಿದ್ದಾರೆ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us