AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Badminton: ವಿಶ್ವ ಚಾಂಪಿಯನ್‌ಶಿಪ್‌ನಿಂದ ಪಿವಿ ಸಿಂಧು ಔಟ್! ಮೂರನೇ ಸುತ್ತಿಗೆ ಲಕ್ಷ್ಯ ಸೇನ್

World Championship: ಈ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಅತ್ಯಂತ ಯಶಸ್ವಿ ಆಟಗಾರ್ತಿಯಾಗಿರುವ ಸಿಂಧು ಈ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ತಲುಪದೇ ಇರುವುದು ಇದೇ ಮೊದಲು. 2019ರಲ್ಲಿ ಈ ಪ್ರಶಸ್ತಿ ಗೆದ್ದಿದ್ದ ಸಿಂಧು, ಈ ಚಾಂಪಿಯನ್‌ಶಿಪ್‌ನಲ್ಲಿ ಒಟ್ಟು ಐದು ಪದಕಗಳನ್ನು ಗೆದ್ದಿದ್ದಾರೆ.

ಪೃಥ್ವಿಶಂಕರ
|

Updated on: Aug 23, 2023 | 9:34 AM

Share
ಇತ್ತಿಚಿನ ದಿನಗಳಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಭಾರತದ ಸ್ಟಾರ್ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ವಿಶ್ವ ಚಾಂಪಿಯನ್‌ಶಿಪ್‌ನ ಎರಡನೇ ಸುತ್ತಿನಲ್ಲಿ ಸೋತು ಟೂರ್ನಿಯಿಂದ ಹೊರಬಿದಿದ್ದಾರೆ.

1 / 7
ವಿಶ್ವ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲಿ ಬೈ ಪಡೆದಿದ್ದ ಸಿಂಧು, ಎರಡನೇ ಸುತ್ತಿನಲ್ಲಿ ಜಪಾನ್‌ನ ನಜೋಮಿ ಒಕುಹರಾ ವಿರುದ್ಧ 21-14, 21-14 ನೇರ ಗೇಮ್‌ಗಳಿಂದ ಸೋತು ಟೂರ್ನಿಯಿಂದ ಹೊರ ನಡೆದಿದ್ದಾರೆ.

2 / 7
ಈ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಅತ್ಯಂತ ಯಶಸ್ವಿ ಆಟಗಾರ್ತಿಯಾಗಿರುವ ಸಿಂಧು ಈ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ತಲುಪದೇ ಇರುವುದು ಇದೇ ಮೊದಲು. 2019ರಲ್ಲಿ ಈ ಪ್ರಶಸ್ತಿ ಗೆದ್ದಿದ್ದ ಸಿಂಧು, ಈ ಚಾಂಪಿಯನ್‌ಶಿಪ್‌ನಲ್ಲಿ ಒಟ್ಟು ಐದು ಪದಕಗಳನ್ನು ಗೆದ್ದಿದ್ದಾರೆ.

3 / 7
ಸಿಂಧು ಮತ್ತು ಒಕುಹರಾ ಮೂರು ವರ್ಷಗಳ ನಂತರ ಪರಸ್ಪರ ಮುಖಾಮುಖಿಯಾಗಿದ್ದರು. ಒಕುಹರಾ ನಿಧಾನವಾಗಿ ಪ್ರಾರಂಭಿಸಿ ಆ ನಂತರ ವೇಗವನ್ನು ಹೆಚ್ಚಿಸಿದರು. ಮೊದಲ ಗೇಮ್‌ನಲ್ಲಿ ಸ್ಕೋರ್ 6-6 ರಲ್ಲಿ ಸಮನಾಗಿತ್ತು. ಆದರೆ ವಿರಾಮದ ವೇಳಗೆ ಒಕುಹರಾ 11-9 ಮುನ್ನಡೆ ಕಾಯ್ದುಕೊಂಡರು. ವಿರಾಮದ ನಂತರವೂ ಪ್ರಾಬಲ್ಯ ಮೆರೆದ ಒಕುಹರಾ 16-12 ರಿಂದ ಮುನ್ನಡೆ ಸಾಧಿಸಿದರು.

4 / 7
ಹೀಗಾಗಿ ಮೊದಲ ಗೇಮ್‌ ಸೋತ ಸಿಂಧು, ಎರಡನೇ ಗೇಮ್‌ನಲ್ಲಿ ಉತ್ತಮ ಆರಂಭ ಪಡೆದು 9-0 ಮುನ್ನಡೆ ಸಾಧಿಸಿದರು. ಆದರೆ ನಂತರ ಒಕುಹರಾ ಪುನರಾಗಮನ ಮಾಡಿದರು. ಆದರೆ ವಿರಾಮದ ವೇಳೆಗೆ ಸಿಂಧು 11-9 ರ ಮುನ್ನಡೆ ಕಾಯ್ದುಕೊಂಡರು. ವಿರಾಮದ ನಂತರ ಪುನರಾಗಮನ ಮಾಡಿದ ಒಕುಹರಾ ಸಿಂಧು ಮಾಡಿದ ತಪ್ಪುಗಳ ಲಾಭ ಪಡೆದು ಗೇಮ್ ಜೊತೆಗೆ ಪಂದ್ಯವನ್ನೂ ಗೆದ್ದರು.

5 / 7
ಯುವ ತಾರೆ ಲಕ್ಷ್ಯ ಸೇನ್ ಪುರುಷರ ಸಿಂಗಲ್ಸ್‌ನ ಮೂರನೇ ಸುತ್ತಿಗೆ ಲಗ್ಗೆ ಇಟ್ಟಿರುವುದು ಭಾರತಕ್ಕೆ ಸಮಾಧಾನದ ಸಂಗತಿಯಾಗಿದೆ. 2021ರ ವಿಶ್ವ ಚಾಂಪಿಯನ್‌ಶಿಪ್​ನಲ್ಲಿ ಕಂಚಿನ ಪದಕ ಗೆದ್ದಿದ್ದ ಲಕ್ಷ್ಯ, ಈ ಆವೃತ್ತಿಯ ಎರಡನೇ ಸುತ್ತಿನಲ್ಲಿ ವಿಶ್ವದ 51ನೇ ಶ್ರೇಯಾಂಕದ ಕೊರಿಯಾದ ಜಿಯೋನ್ ಹ್ಯೊಕ್ ಜಿನ್ ಅವರನ್ನು 21-11 21-12 ಸೆಟ್‌ಗಳಿಂದ ಸೋಲಿಸಿದರು.

6 / 7
ಈ ಗೆಲುವಿನೊಂದಿಗೆ ಲಕ್ಷ್ಯ ಏಷ್ಯಾ ಟೀಮ್ ಚಾಂಪಿಯನ್‌ಶಿಪ್-2022ರ ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ. ಇದೀಗ ಲಕ್ಷ್ಯ ಮುಂದಿನ ಸುತ್ತಿನಲ್ಲಿ ಥಾಯ್ಲೆಂಡ್‌ನ ಕುನ್ಲಾವುಟ್ ವಿಟಿಡ್ಸರ್ನ್ ಅವರನ್ನು ಎದುರಿಸುವ ಸಾಧ್ಯತೆಗಳಿವೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!