AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ ಬಿಜೆಪಿ ಅಭ್ಯರ್ಥಿ ಕಡೆಯವರಿಂದ ಕ್ಯೂಆರ್ ಕೋಡ್ ಕೂಪನ್ ವಿತರಣೆ; ಆರೋಪಿಗಳು ಅರೆಸ್ಟ್

ಕ್ಯೂಆರ್ ಕೋಡ್ ಕೂಪನ್ ವಿತರಣೆ ಆರೋಪ ಸಂಬಂಧ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಆರೋಪಿಗಳನ್ನು ಫ್ಲೈಯಿಂಗ್ ಸ್ಕ್ವಾಡ್ ತಂಡ ಬಂಧಿಸಿದೆ.

Rakesh Nayak Manchi
Rakesh Nayak Manchi|

Updated on: May 04, 2023 | 9:02 PM

Share
QR code coupon distributed by Doddaballapura BJP candidate side Accused arrested by FST in Hosa halli

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಿಜೆಪಿ ಅಭ್ಯರ್ಥಿ ಕಡೆಯವರಿಂದ ಕ್ಯೂಆರ್ ಕೋಡ್ ಕೂಪನ್ ವಿತರಣೆ ಆರೋಪ ಸಂಬಂಧ ಮಂಗಳೂರು ಮೂಲದ ಮೂವರು ಆರೋಪಿಗಳನ್ನು ಫ್ಲೈಯಿಂಗ್ ಸ್ಕ್ವಾಡ್ ತಂಡ ಬಂಧಿಸಿದೆ.

1 / 6
QR code coupon distributed by Doddaballapura BJP candidate side Accused arrested by FST in Hosa halli

ಹೊಸಹಳ್ಳಿ ಗ್ರಾಮದಲ್ಲಿ ಅಪರಿಚಿತರು ಕ್ಯೂರ್ ಕೊಡ್ ಕೂಪನ್ ವಿತರಿಸುತ್ತಿರುವುದಾಗಿ ಕೆಲವು ಗ್ರಾಮಸ್ಥರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಅನ್ವಯ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಕೂಪನ್ ವಿತರಿಸುತ್ತಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

2 / 6
QR code coupon distributed by Doddaballapura BJP candidate side Accused arrested by FST in Hosa halli

ಹಲವು ತಂಡಗಳಾಗಿ ಬಂದು ತಾಲೂಕಿನಾದ್ಯಂತ ಗ್ರಾಮಗಳಿಗೆ ತೆರಳಿ ಧೀರಜ್ ಮುನಿರಾಜು ಅವರ ಕಡೆಯವರು ಎಂದು ಹೇಳಿ ಕಾರ್ಡ್​ಗಳನ್ನು ವಿತರಣೆ ಮಾಡುತ್ತಿದ್ದರು.

3 / 6
QR code coupon distributed by Doddaballapura BJP candidate side Accused arrested by FST in Hosa halli

ಮತ ಚೀಟಿಯಲ್ಲಿನ ಮಾಹಿತಿಯುಳ್ಳ ಕ್ಯೂಆರ್ ಕೋಡ್ ಹೊಂದಿರುವ ಕೂಪನ್ ಇದಾಗಿದೆ. ಸದ್ಯ ಡಿ.ರಾಜೇಶ್ವರಿ ನೇತೃತ್ವದ ಎಫ್ಎಸ್​ಟಿ ತಂಡದಿಂದ ತನಿಖೆ ನಡೆಯುತ್ತಿದೆ.

4 / 6
QR code coupon distributed by Doddaballapura BJP candidate side Accused arrested by FST in Hosa halli

ಬಂಧಿತರಿಂದ ಮತದಾರ ಪಟ್ಟಿ, ಹಂಚಲು ತಂದಿದ್ದ ನವ ದೊಡ್ಡಬಳ್ಳಾಪುರ ಹೆಸರಿನ ಕ್ಯೂಆರ್ ಕೋಡ್ ಕೂಪನ್​ಗಳನ್ನು ವಶಕ್ಕೆ ಪಡೆಯಲಾಗಿದೆ.

5 / 6
QR code coupon distributed by Doddaballapura BJP candidate side Accused arrested by FST in Hosa halli

ಹೊಸಹಳ್ಳಿ ಪೊಲೀಸ್ ಠಾಣೆಗೆ ಆರೋಪಿಗಳನ್ನು ಕರೆದೊಯ್ದ ಅಧಿಕಾರಿಗಳ ತಂಡ ತನಿಖೆ ಆರಂಭಿಸಿದೆ.

6 / 6
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು

'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ