ತವರು ಮನೆಯಲ್ಲಿ ಗಣೇಶ ಹಬ್ಬ ಆಚರಿಸಿದ ರಾಧಿಕಾ ಪಂಡಿತ್: ಮಕ್ಕಳ ಖುಷಿ ನೋಡಿ

Updated on: Aug 27, 2025 | 6:17 PM

ಎಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ಜೋರಾಗಿದೆ. ಸೆಲೆಬ್ರಿಟಿಗಳು ಕೂಡ ಸಡಗರದಿಂದ ಹಬ್ಬ ಆಚರಿಸಿದ್ದಾರೆ. ನಟಿ ರಾಧಿಕಾ ಪಂಡಿತ್ ಅವರು ಸಹ ಗಣೇಶ ಚತುರ್ಥಿ ಆಚರಿಸಿ ಸಂಭ್ರಮಿಸಿದ್ದಾರೆ. ತವರು ಮನೆಯಲ್ಲಿ ಮಕ್ಕಳ ಜೊತೆಯಲ್ಲಿ ಹಬ್ಬ ಮಾಡಿರುವ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಗ್ಯಾಲರಿ ಇಲ್ಲಿದೆ..

1 / 5
ಗೌರಿ ಗಣೇಶ ಹಬ್ಬ ಎಂದರೆ ಹೆಣ್ಮಕ್ಕಳಿಗೆ ವಿಶೇಷ ಪ್ರೀತಿ. ತವರು ಮನೆಗೆ ತೆರಳಿ ಹಬ್ಬ ಆಚರಿಸುವುದು ಎಂದರೆ ಎಲ್ಲಿಲ್ಲದ ಸಂಭ್ರಮ. ನಟಿ ರಾಧಿಕಾ ಪಂಡಿತ್ ಅವರು ಕೂಡ ಅಮ್ಮನ ಮನೆಯಲ್ಲಿ ಹಬ್ಬ ಆಚರಿಸಿದ್ದಾರೆ.

ಗೌರಿ ಗಣೇಶ ಹಬ್ಬ ಎಂದರೆ ಹೆಣ್ಮಕ್ಕಳಿಗೆ ವಿಶೇಷ ಪ್ರೀತಿ. ತವರು ಮನೆಗೆ ತೆರಳಿ ಹಬ್ಬ ಆಚರಿಸುವುದು ಎಂದರೆ ಎಲ್ಲಿಲ್ಲದ ಸಂಭ್ರಮ. ನಟಿ ರಾಧಿಕಾ ಪಂಡಿತ್ ಅವರು ಕೂಡ ಅಮ್ಮನ ಮನೆಯಲ್ಲಿ ಹಬ್ಬ ಆಚರಿಸಿದ್ದಾರೆ.

2 / 5

ರಾಧಿಕಾ ಪಂಡಿತ್ ಎಲ್ಲ ಹಬ್ಬಗಳನ್ನು ಖುಷಿಯಿಂದ ಆಚರಣೆ ಮಾಡುತ್ತಾರೆ. ಅಲ್ಲದೇ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಎಲ್ಲ ಅಪ್​​ಡೇಟ್​ ನೀಡುತ್ತಾರೆ. ಈ ಬಾರಿಯೂ ಅದು ಮುಂದುವರಿದಿದೆ.

3 / 5

ಗಣೇಶ ಚತುರ್ಥಿ ಹಬ್ಬದ ಸಡಗರದಲ್ಲಿ ಯಶ್, ರಾಧಿಕಾ ಪಂಡಿತ್ ದಂಪತಿಯ ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕೂಡ ಭಾಗಿ ಆಗಿದ್ದಾರೆ. ಮಕ್ಕಳ ಖುಷಿಯ ಕ್ಷಣಗಳಿಗೆ ಈ ಫೋಟೋಗಳು ಸಾಕ್ಷಿ ಆಗಿವೆ.

4 / 5

ಹಬ್ಬದ ಪ್ರಯುಕ್ತ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ಹಲವು ಬಗೆಯ ವಿಶೇಷ ಅಡುಗೆ ಮಾಡಲಾಗಿದೆ. ಎಲ್ಲವನ್ನೂ ಸವಿದು ಅವರು ಎಂಜಾಯ್ ಮಾಡಿದ್ದಾರೆ. ತಮ್ಮ ಅಭಿಮಾನಿಗಳಿಗೆ ಹಬ್ಬದ ವಿಶ್ ಮಾಡಿದ್ದಾರೆ.

5 / 5

ಕುಟುಂಬಕ್ಕೆ ರಾಧಿಕಾ ಪಂಡಿತ್ ಅವರು ಪೂರ್ತಿ ಸಮಯ ನೀಡುತ್ತಿದ್ದಾರೆ. ಹಾಗಾಗಿ ಅವರು ಸಿನಿಮಾ ಕೆಲಸಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಮತ್ತೆ ಅವರು ನಟನೆಗೆ ಮರಳಬೇಕು ಎಂದು ಫ್ಯಾನ್ಸ್ ಬಯಸಿದ್ದಾರೆ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us