Updated on: Oct 24, 2023 | 12:48 PM
ರಾಧಿಕಾ ಪಂಡಿತ್ ಹಾಗೂ ಯಶ್ ದಂಪತಿ ಅನೇಕರಿಗೆ ಮಾದರಿ. ಇವರ ಮಧ್ಯೆ ಅಗಾಧ ಪ್ರೀತಿ ಇದೆ. ಒಬ್ಬರಿಗೊಬ್ಬರು ಬೆಂಬಲಿಸುತ್ತಾ ಸಂಸಾರ ನಡೆಸುತ್ತಿದ್ದಾರೆ. ಇವರನ್ನು ಕಂಡರೆ ಅನೇಕರಿಗೆ ಇಷ್ಟ. ಈಗ ಅಭಿಮಾನಿಗಳಿಗೆ ಖುಷಿ ಆಗುವಂಥ ಫೋಟೋನ ಅವರು ಹಂಚಿಕೊಂಡಿದ್ದಾರೆ.
ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಹಲವು ಬಗೆಯ ಫೋಟೋಗಳನ್ನು ಪೋಸ್ಟ್ ಮಾಡುತ್ತಾರೆ. ಈಗ ಅವರು ಶೇರ್ ಮಾಡಿಕೊಂಡಿರುವ ಫೋಟೋ ಎಲ್ಲರ ಗಮನ ಸೆಳೆದಿದೆ.
ರಾಧಿಕಾ ಪಂಡಿತ್ ಅವರು ನವರಾತ್ರಿಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ತೆಗೆದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋ 1 ಗಂಟೆಯಲ್ಲಿ ಲಕ್ಷಾಂತರ ಲೈಕ್ಸ್ ಪಡೆದಿದೆ.
ಯಶ್ ಅವರ ಲುಕ್ ಕೂಡ ಇಲ್ಲಿ ಗಮನ ಸೆಳೆದಿದೆ. ಅವರು ರಾಯಲ್ ಆಗಿ ರೆಡಿ ಆಗಿದ್ದಾರೆ. ಅವರು ಕಣ್ಣಿಗೆ ಗಾಗಲ್ ಹಾಕಿ ಮಿಂಚಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.
ಯಶ್ ಮಕ್ಕಳು ವಾಹನಗಳಿಗೆ ಪೂಜೆ ಮಾಡಿದ್ದಾರೆ. ಈ ಫೋಟೋಗಳನ್ನೂ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆಯ್ರಾ ಹಾಗೂ ಯಥರ್ವ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.
ಯಶ್ ಅವರ ಹೊಸ ಸಿನಿಮಾ ಘೋಷಣೆ ಆಗಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ. ‘ಕೆಜಿಎಫ್ 2’ ಬಳಿಕ ಯಶ್ ಅವರು ಒಂದು ದೊಡ್ಡ ಬ್ರೇಕ್ ಪಡೆದಿದ್ದಾರೆ.