Updated on: Aug 18, 2024 | 9:00 AM
ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಅನೇಕರಿಗೆ ಮಾದರಿ. ಅವರು ತಮ್ಮ ದಾಂಪತ್ಯ ಜೀವನವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ಕಾರಣಕ್ಕೆ ಅವರು ಅನೇಕರ ಮೆಚ್ಚುಗೆ ಪಡೆದಿದ್ದಾರೆ.
ಇತ್ತೀಚೆಗೆ ರಾಧಿಕಾ ಪಂಡಿತ್ ಅವರು ವರಮಹಾಲಕ್ಷ್ಮೀ ಹಬ್ಬ ಆಚರಿಸಿದ್ದಾರೆ. ಇದರಲ್ಲಿ ಯಶ್ ಅವರು ಭಾಗಿ ಆಗಿದ್ದಾರೆ. ಇಬ್ಬರೂ ಒಟ್ಟಾಗಿ ಹಬ್ಬ ಆಚರಿಸಿದ್ದಾರೆ.
ಯಶ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಸಿನಿಮಾ ಕೆಲಸಗಳ ಮಧ್ಯೆ ಫ್ಯಾಮಿಲಿಗಾಗಿ ಸಮಯ ಮೀಸಲು ಇಡುತ್ತಾರೆ. ಹೀಗಾಗಿ ಅವರು ಪೂಜೆಗಳಲ್ಲಿ ಭಾಗಿ ಆಗುತ್ತಾರೆ.
ರಾಧಿಕಾ ಪಂಡಿತ್ ಅವರು ಹಬ್ಬ ಆಚರಿಸುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಯಶ್ ಅವರು ಕೂಡ ಇದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.
ರಾಧಿಕಾ ಪಂಡಿತ್ ಅವರನ್ನು ಯಶ್ ಅತಿಯಾಗಿ ಪ್ರೀತಿಸುತ್ತಾರೆ. ಅವರು ಆಗಾಗ ಸುತ್ತಾಟ ನಡೆಸುತ್ತಾ ಇರುತ್ತಾರೆ. ಸದ್ಯ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.