- Kannada News Photo gallery Radhika Pandit and Yash celebrated Varamahalakshmi festival 2023 with Kids
ರಾಧಿಕಾ ಪಂಡಿತ್-ಯಶ್ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಡಗರ; ಇಲ್ಲಿದೆ ಫೋಟೋ ಗ್ಯಾಲರಿ
ಹಬ್ಬಗಳ ಬಗ್ಗೆ ರಾಧಿಕಾ ಪಂಡಿತ್ ಅವರಿಗೆ ವಿಶೇಷ ಆಸಕ್ತಿ ಇದೆ. ಅವರ ಜೊತೆ ಯಶ್ ಕೂಡ ಅಷ್ಟೇ ಆಸಕ್ತಿಯಿಂದ ಭಾಗಿ ಆಗುತ್ತಾರೆ. ಈ ಬಾರಿ ಅವರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಹೇಗಿತ್ತು ಎಂಬುದನ್ನು ಈ ಫೋಟೋಗಳೇ ವಿವರಿಸುತ್ತವೆ..
Updated on: Aug 27, 2023 | 12:26 PM

ನಟಿ ರಾಧಿಕಾ ಪಂಡಿತ್ ಅವರು ಈಗ ಕುಟುಂಬಕ್ಕೆ ಪೂರ್ತಿ ಸಮಯ ನೀಡುತ್ತಿದ್ದಾರೆ. ಮಕ್ಕಳಾದ ಆಯ್ರಾ ಮತ್ತು ಯಥರ್ವ್ನ ಆರೈಕೆಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಅವರ ಜೊತೆಗೆ ಹಬ್ಬ-ಹರಿದಿನಗಳನ್ನು ಸಡಗರದಿಂದ ಅವರು ಆಚರಿಸುತ್ತಿದ್ದಾರೆ.

ಇತ್ತೀಚೆಗೆ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ಬಹಳ ಸಡಗರದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಶ್ರದ್ಧೆ-ಭಕ್ತಿಯಿಂದ ಪೂಜೆ ನೆರವೇರಿಸಲಾಗಿದೆ. ಆ ಸಂದರ್ಭದ ಕಲರ್ಫುಲ್ ಫೋಟೋಗಳು ಈಗ ವೈರಲ್ ಆಗಿವೆ.

ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಅಭಿಮಾನಿಗಳಿಗಾಗಿ ಹೊಸ ಫೋಟೋಸ್ ಹಂಚಿಕೊಳ್ಳುತ್ತಾರೆ. ಈ ವಾರ ಅವರು ತಮ್ಮ ಮನೆಯಲ್ಲಿನ ಹಬ್ಬದ ಝಲಕ್ ತೋರಿಸುವಂತಹ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.

ಯಶ್ ಅವರು ‘ಕೆಜಿಎಫ್: ಚಾಪ್ಟರ್ 2’ ಬಳಿಕ ಹೊಸ ಸಿನಿಮಾ ಅನೌನ್ಸ್ ಮಾಡಿಲ್ಲ. ಸದ್ಯಕ್ಕೆ ಅವರು ಫ್ಯಾಮಿಲಿ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಪತ್ನಿ ಮತ್ತು ಮಕ್ಕಳ ಜೊತೆ ಸೇರಿ ಅವರು ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ.

ರಾಧಿಕಾ ಪಂಡಿತ್ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಿದ್ದರೂ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇದ್ದಾರೆ. ಇನ್ಸ್ಟಾಗ್ರಾಮ್ ಮೂಲಕ ಅವರು ಆಗಾಗ ಏನಾದರೂ ಅಪ್ಡೇಟ್ ನೀಡುತ್ತಾ ಇರುತ್ತಾರೆ.

ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಪಂಡಿತ್ ಅವರಿಗೆ ದೊಡ್ಡ ಫ್ಯಾನ್ ಫಾಲೋಯಿಂಗ್ ಇದೆ. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು 32 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ರಾಧಿಕಾ ಪಂಡಿತ್ ಅವರು ಇನ್ಸ್ಟಾಗ್ರಾಮ್ನಲ್ಲಿ ಈ ಫೋಟೋಗಳನ್ನು ಹಂಚಿಕೊಂಡು ಒಂದು ಗಂಟೆ ಕಳೆಯುವುದರೊಳಗೆ ನಾಲ್ಕು ಲಕ್ಷಕ್ಕೂ ಅಧಿಕ ಜನರು ಲೈಕ್ ಮಾಡಿದ್ದಾರೆ. ಸಾವಿರಾರು ಜನರು ಕಮೆಂಟ್ ಮೂಲಕ ವಿಶ್ ಮಾಡಿದ್ದಾರೆ.



















