
ರಾಧಿಕಾ ಪಂಡಿತ್ ಅವರು ಪತಿ ಯಶ್ ಜೊತೆಗಿನ ಹೊಸ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಇದರ ಜೊತೆಗೆ ಅವರು ನೀಡಿದ ಕ್ಯಾಪ್ಷನ್ ಗಮನ ಸೆಳೆಯುತ್ತಿದೆ. ಸ್ಟಾರ್ ದಂಪತಿಯ ಈ ಫೋಟೋಗಳು ವೈರಲ್ ಆಗುತ್ತಿವೆ.

‘ಒಟ್ಟಾಗಿ ಏನು ಮಾಡುತ್ತೇವೆ ಎಂಬುದು ಮುಖ್ಯವಲ್ಲ. ಮೌನದಲ್ಲೂ ಏನನ್ನು ಅರ್ಥ ಮಾಡಿಕೊಳ್ಳುತ್ತೇವೆ ಎಂಬುದೇ ಒಂದು ಸಂಬಂಧದಲ್ಲಿ ಅತಿ ಮುಖ್ಯ ವಿಷಯ’ ಎಂದು ರಾಧಿಕಾ ಪಂಡಿತ್ ಅವರು ಕ್ಯಾಪ್ಷನ್ ನೀಡಿದ್ದಾರೆ.

ಹಲವು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಲೇ, ಚಿತ್ರರಂಗದಲ್ಲಿ ಸಾಧನೆ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಅವರು ಅನೇಕರಿಗೆ ಸ್ಫೂರ್ತಿ ಆಗಿದ್ದಾರೆ. ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತುಕೊಂಡಿದ್ದಾರೆ.

ಪ್ಯಾನ್ ಇಂಡಿಯಾ ಸ್ಟಾರ್ ಆಗಿ, ಬಹುಬೇಡಿಕೆಯ ನಟನಾಗಿರುವ ಯಶ್ ಅವರು ಈಗ ‘ಟಾಕ್ಸಿಕ್’, ‘ರಾಮಾಯಣ’ ಮುಂತಾದ ಪ್ರಾಜೆಕ್ಟ್ಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ವೃತ್ತಿಜೀವನಕ್ಕೆ ರಾಧಿಕಾ ಪಂಡಿತ್ ಬೆಂಬಲವಾಗಿದ್ದಾರೆ.

ರಾಧಿಕಾ ಪಂಡಿತ್ ಮತ್ತು ಯಶ್ ಅವರು ಜೋಡಿಯಾಗಿ ಜಾಹೀರಾತುಗಳಲ್ಲಿ ಕೂಡ ನಟಿಸಿದ್ದಾರೆ. ರಾಧಿಕಾ ಪಂಡಿತ್ ಅವರು ಮೊದಲಿನಂತೆ ಮತ್ತೆ ಸಿನಿಮಾಗಳಲ್ಲಿ ನಟಿಸಲು ಆರಂಭಿಸಬೇಕು ಎಂಬುದು ಅಭಿಮಾನಿಗಳ ಆಸೆ.