- TV9 Kannada Kannada News Photos Radhika Pandit Celebrate Christmas with Ayra And Yatharv In Her House
ಮಕ್ಕಳ ಜೊತೆ ಕ್ರಿಸ್ಮಸ್ ಆಚರಿಸಿದ ರಾಧಿಕಾ ಪಂಡಿತ್; ಇಲ್ಲಿದೆ ಕ್ಯೂಟ್ ಫೋಟೋಸ್
ರಾಧಿಕಾ ಪಂಡಿತ್ ಅವರು ಮನೆಯಲ್ಲಿ ಎಲ್ಲಾ ಹಬ್ಬಗಳನ್ನು ಆಚರಿಸುತ್ತಾರೆ. ಈಗ ಅವರು ಕ್ರಿಸ್ಮಸ್ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರಾಧಿಕಾ ಪಂಡಿತ್ ಅವರು ಪ್ರತಿ ವರ್ಷವೂ ಕ್ರಿಸ್ಮಸ್ ಹಬ್ಬವನ್ನು ಆಚರಣೆ ಮಾಡುತ್ತಾರೆ.
Updated on: Dec 26, 2025 | 7:22 AM

ರಾಧಿಕಾ ಪಂಡಿತ್ ಅವರು ಈಗ ನಟನೆಯಿಂದ ದೂರ ಇದ್ದಾರೆ. ಅವರು ಈಗ ಮಕ್ಕಳನ್ನು ಪೋಷಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಕ್ರಿಸ್ಮಸ್ ಆಚರಣೆ ಮಾಡಿದ್ದಾರೆ. ಎಲ್ಲರಿಗೂ ಅವರು ಕ್ರಿಸ್ಮಸ್ ಹಾಗೂ ಹೊಸ ವರ್ಷದ ವಿಶ್ ಕೋರಿದ್ದಾರೆ.

ರಾಧಿಕಾ ಪಂಡಿತ್ ಅವರು ಮನೆಯಲ್ಲಿ ಕ್ರಿಸ್ಮಸ್ ಟ್ರೀ ಅಲಂಕರಿಸಿದ್ದಾರೆ. ಇದಕ್ಕೆ ಲೈಟಿಂಗ್ ಮಾಡಲಾಗಿದೆ. ಈ ಫೋಟೋಗಳು ಗಮನ ಸೆಳಯೋ ರೀತಿಯಲ್ಲಿ ಇದೆ. ರಾಧಿಕಾ ಜೊತೆ ಯಥರ್ವ್ ಹಾಗೂ ಆಯ್ರಾ ಕೂಡ ಇದ್ದಾರೆ. ಇವರು ಕ್ಯೂಟ್ ಆಗಿ ಕಾಣಿಸಿದ್ದಾರೆ.

ರಾಧಿಕಾ ಪಂಡಿತ್ ಅವರು ಪ್ರತಿ ವರ್ಷವೂ ಕ್ರಿಸ್ಮಸ್ ಆಚರಣೆ ಮಾಡುತ್ತಾರೆ. ಅವರು ಹೊಸ ವರ್ಷವನ್ನು ಅವರು ಖುಷಿ ಖುಷಿಯಿಂದ ಆಮಂತ್ರಿಸಿಕೊಳ್ಳುತ್ತಾರೆ. ರಾಧಿಕಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಹೀಗಾಗಿ ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ರಾಧಿಕಾ ಪಂಡಿತ್ ಹಂಚಿಕೊಂಡ ಫೋಟೋದಲ್ಲಿ ಯಶ್ ಇಲ್ಲ. ಅವರು ‘ಟಾಕ್ಸಿಕ್’ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದಲೇ ಅವರು ಈ ಸಂಭ್ರಮದಲ್ಲಿ ಭಾಗಿ ಆಗಲು ಸಾಧ್ಯವಾಗುತ್ತಿಲ್ಲ. ಮಾರ್ಚ್ 19ರಂದು ‘ಟಾಕ್ಸಿಕ್’ ರಿಲೀಸ್ ಆಗುತ್ತಿದೆ.

ರಾಧಿಕಾ ಪಂಡಿತ್ ಅವರು ಕುಟುಂಬದ ಜೊತೆ ಸಮಯ ಕಳೆಯುತ್ತಾರೆ. ಅವರು ಯಶ್ ವೃತ್ತಿ ಜೀವನಕ್ಕೆ ಬೆಂಬಲ ನೀಡುತ್ತಿದ್ದಾರೆ. ಯಥರ್ವ್ ಹಾಗೂ ಆಯ್ರಾ ಬಗ್ಗೆ ರಾಧಿಕಾ ಗಮನ ಹರಿಸುತ್ತಿರುವುದರಿಂದ ಯಶ್ ಅವರು ಯಾವುದೇ ಚಿಂತೆ ಇಲ್ಲದೆ ಸಿನಿಮಾ ಕೆಲಸಗಳಲ್ಲಿ ಭಾಗಿ ಆಗುತ್ತಿದ್ದಾರೆ.

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



