ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ರಾಧಿಕಾ ಪಂಡಿತ್; ‘ಟಾಕ್ಸಿಕ್’ ಪ್ರಚಾರದಲ್ಲಿ ಯಶ್ ಬ್ಯುಸಿ

Updated on: Aug 21, 2026 | 10:50 PM

ನಟಿ ರಾಧಿಕಾ ಪಂಡಿತ್ ಅವರು ಸಡಗರದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿದ್ದಾರೆ. ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಆದರೆ ಈ ಬಾರಿ ಅವರ ಜೊತೆಯಲ್ಲಿ ಪತಿ ಯಶ್ ಕಾಣಿಸಿಲ್ಲ. ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಇರುವುದರಿಂದ ಯಶ್ ಅವರು ಹಬ್ಬದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ.

1 / 5
ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ರಾಧಿಕಾ ಪಂಡಿತ್ ಹಾಗೂ ಯಶ್ ದಂಪತಿಯ ಮನೆಯಲ್ಲಿ ಕೂಡ ಸಂಭ್ರಮದಿಂದ ಹಬ್ಬ ಆಚರಿಸಿದ್ದಾರೆ. ಫೋಟೋಗಳು ವೈರಲ್ ಆಗಿವೆ.

ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ರಾಧಿಕಾ ಪಂಡಿತ್ ಹಾಗೂ ಯಶ್ ದಂಪತಿಯ ಮನೆಯಲ್ಲಿ ಕೂಡ ಸಂಭ್ರಮದಿಂದ ಹಬ್ಬ ಆಚರಿಸಿದ್ದಾರೆ. ಫೋಟೋಗಳು ವೈರಲ್ ಆಗಿವೆ.

2 / 5

ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ಅಪ್​ಡೇಟ್ ನೀಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡು ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.

3 / 5

ಪ್ರತಿ ಹಬ್ಬದಲ್ಲಿ ಯಶ್ ಕೂಡ ಜೊತೆಯಾಗುತ್ತಿದ್ದರು. ಆದರೆ ಈ ಬಾರಿ ಅವರು ‘ಟಾಕ್ಸಿಕ್’ ಸಿನಿಮಾದ ಪ್ರಚಾರದಲ್ಲಿ ತೊಡಗಿಕೊಂಡಿರುವ ಕಾರಣದಿಂದ ಹಬ್ಬ ಆಚರಿಸಲು ಅವರಿಗೆ ಬಿಡುವು ಸಿಕ್ಕಿಲ್ಲ.

4 / 5

ಯಶ್ ಅವರು ವಿವಿಧ ನಗರಗಳಿಗೆ ಭೇಟಿ ನೀಡಿ ‘ಟಾಕ್ಸಿಕ್’ ಚಿತ್ರದ ಪ್ರಮೋಷನ್ ಮಾಡುತ್ತಿದ್ದಾರೆ. ಅವರ ಅನುಪಸ್ಥಿತಿಯಲ್ಲೇ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಹಬ್ಬವನ್ನು ಆಚರಿಸಿದ್ದಾರೆ.

5 / 5

ಲಕ್ಷ್ಮಿ ಪೂಜೆಯ ಸಮಯದಲ್ಲಿ ಯಶ್ ಅವರು ವಿಡಿಯೋ ಕಾಲ್ ಮೂಲಕ ಪತ್ನಿ ಹಾಗೂ ಮಕ್ಕಳ ಜೊತೆ ಮಾತನಾಡಿದ್ದಾರೆ. ಆ ಸಂದರ್ಭದ ಫೋಟೋವನ್ನು ಕೂಡ ರಾಧಿಕಾ ಪೋಸ್ಟ್ ಮಾಡಿದ್ದಾರೆ.

Published On - 10:48 pm, Fri, 21 August 26

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us