‘ನೀವು ಯಾವಾಗಲೂ ಸ್ಯಾಂಡಲ್ವುಡ್ನ ರಾಜಕುಮಾರಿ’; ರಾಧಿಕಾ ಪಂಡಿತ್ ಫೋಟೋಗೆ ಫ್ಯಾನ್ಸ್ ಕಮೆಂಟ್
ರಾಧಿಕಾ ಪಂಡಿತ್ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.
Updated on: Jul 03, 2023 | 9:04 AM

ರಾಧಿಕಾ ಪಂಡಿತ್ ಅವರು ನಟನೆಯಿಂದ ದೂರ ಇದ್ದಾರೆ. ಅವರ ಸಂಪೂರ್ಣ ಗಮನ ಕುಟುಂಬದ ಮೇಲಿದೆ. ಹಾಗಂತ ಅವರು ಚಿತ್ರರಂಗದ ಜೊತೆಗಿನ ನಂಟು ಕಳೆದುಕೊಂಡಿಲ್ಲ.

ಯಶ್ ವೃತ್ತಿಜೀವನಕ್ಕೆ ಬೆಂಬಲವಾಗಿ ರಾಧಿಕಾ ಪಂಡಿತ್ ನಿಂತಿದ್ದಾರೆ. ಯಶ್ ಜೊತೆ ಅನೇಕ ಸಿನಿಮಾ ಕಾರ್ಯಕ್ರಮಗಳಿಗೆ ಅವರು ಆಗಮಿಸುತ್ತಾರೆ.

ಈಗ ರಾಧಿಕಾ ಪಂಡಿತ್ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ನೀವು ಯಾವಾಗಲೂ ಸ್ಯಾಂಡಲ್ವುಡ್ನ ರಾಜಕುಮಾರಿ’ ಎಂದು ಅಭಿಮಾನಿಗಳು ಕರೆದಿದ್ದಾರೆ.

ರಾಧಿಕಾ ಪಂಡಿತ್ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅಭಿಮಾನಿಗಳಿಗೋಸ್ಕರ ಪ್ರತಿ ಭಾನುವಾರ ಅವರು ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ರಾಧಿಕಾ ಪಂಡಿತ್ ಹೊಸ ಫೋಟೋ ಹಂಚಿಕೊಂಡಾಗ ಅವರಿಗೆ ‘ಯಶ್ 19’ ಸಿನಿಮಾ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಈ ಬಾರಿಯೂ ಹಾಗೆಯೇ ಆಗಿದೆ.

ರಾಧಿಕಾ ಪಂಡಿತ್ ಅವರು ಆಗಾಗ ಮಕ್ಕಳ ಜೊತೆಗಿನ ಫೋಟೋ ಹಂಚಿಕೊಳ್ಳುತ್ತಾರೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಡುತ್ತಾರೆ.

ರಾಜೇಶ್ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



