ಪರಸ್ಪರ ಪ್ರೀತಿಸಿ ಮದುವೆ ಆದ ರಾಧಿಕಾ ಪಂಡಿತ್ ಮತ್ತು ಯಶ್ ಅವರು ಅಭಿಮಾನಿಗಳಿಗೆ ಮಾದರಿ ಆಗಿದ್ದಾರೆ. ಚಿತ್ರರಂಗದಲ್ಲಿ ಸಾಧನೆ ಮಾಡುತ್ತಲೇ ತಮ್ಮ ಪ್ರೀತಿಯನ್ನು ಅವರು ಪಡೆದುಕೊಂಡರು. ಇಂದು (ಡಿಸೆಂಬರ್ 9) ಯಶ್ ಮತ್ತು ರಾಧಿಕಾ ಪಂಡಿತ್ ಜೋಡಿಗೆ 8ನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ. ಆ ಪ್ರಯುಕ್ತ ಕೆಲವು ಫೋಟೋಗಳನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದಾರೆ.