ರಾಧಿಕಾ ಪಂಡಿತ್ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಇಲ್ಲಿವೆ ಫೋಟೋಗಳು
ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅನೇಕ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗ ಹಬ್ಬದ ಫೋಟೋವನ್ನು ಅವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.
Updated on: Aug 06, 2022 | 2:15 PM

ನಟಿ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಈ ಫೋಟೋಗಳನ್ನು ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಪೋಸ್ಟ್ ಮಾಡಿ ಒಂದು ಗಂಟೆ ಕಳೆಯುವುದರ ಒಳಗೆ ಲಕ್ಷಾಂತರ ವೀವ್ಸ್ ಬಂದಿದೆ.

ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅನೇಕ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗ ಹಬ್ಬದ ಫೋಟೋವನ್ನು ಅವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆಗಸ್ಟ್ 5ರಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬದ ಆಚರಣೆ ಮಾಡಿದ್ದಾರೆ. ಪುತ್ರಿ ಆಯ್ರಾ, ಪುತ್ರ ಯಥರ್ವ್ ಜತೆ ಸೇರಿ ರಾಧಿಕಾ ಹಬ್ಬ ಆಚರಿಸಿದ್ದಾರೆ.

ರಾಧಿಕಾ ಪಂಡಿತ್ ಅವರು ಪತಿ ಯಶ್ ಜತೆ ಇತ್ತೀಚೆಗೆ ಯುರೋಪ್ಗೆ ತೆರಳಿದ್ದರು. ಅಲ್ಲಿ ಸಮಯ ಕಳೆದು ಮರಳಿ ಭಾರತಕ್ಕೆ ಬಂದಿದ್ದಾರೆ. ಈ ಫೋಟೋಗಳನ್ನು ರಾಧಿಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ರಾಧಿಕಾ ಪಂಡಿತ್