ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದೇಕೆ? ಕಾರಣ ತಿಳಿಸಿದ ಯಶ್ ಪತ್ನಿ
ರಾಧಿಕಾ ಪಂಡಿತ್ ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದೇಕೆ ಎಂಬುದಕ್ಕೆ ಕಾರಣ ತಿಳಿಸಿದ್ದಾರೆ.
Updated on: Feb 13, 2023 | 1:40 PM

ನಟಿ ರಾಧಿಕಾ ಪಂಡಿತ್ ಅವರು ಈ ಮೊದಲು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟೀವ್ ಆಗಿದ್ದರು. ಪ್ರತಿ ವಾರ ಹಲವು ಪೋಸ್ಟ್ಗಳನ್ನು ಅವರು ಹಂಚಿಕೊಳ್ಳುತ್ತಿದ್ದರು. ಮಕ್ಕಳ ಚೇಷ್ಟೆಯ ವಿಡಿಯೋ ಪೋಸ್ಟ್ ಮಾಡುತ್ತಿದ್ದರು.

ಆದರೆ, ರಾಧಿಕಾ ಪಂಡಿತ್ ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದೇಕೆ ಎಂಬುದಕ್ಕೆ ಕಾರಣ ತಿಳಿಸಿದ್ದಾರೆ.

ರಾಧಿಕಾ ಪಂಡಿತ್ ಅವರು ಸಂಬಂಧಿಕರ ಮದುವೆಯಲ್ಲಿ ಬ್ಯುಸಿ ಇದ್ದರು. ಹೀಗಾಗಿ, ಸೋಶಿಯಲ್ ಮೀಡಿಯಾ ಕಡೆ ಮುಖ ಮಾಡಲು ಅವರಿಗೆ ಸಾಧ್ಯವಾಗಿಲ್ಲ.

ಭಾನುವಾರ (ಫೆಬ್ರವರಿ 12) ರಾಧಿಕಾ ಪಂಡಿತ್ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಸೆಲ್ಫಿ ಫೋಟೋಗಳನ್ನು ಹಂಚಿಕೊಂಡು, ತಾವು ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದು ಏಕೆ ಎಂಬುದನ್ನು ವಿವರಿಸಿದ್ದಾರೆ.

ರಾಧಿಕಾ ಪಂಡಿತ್ ಅವರು ಇತ್ತೀಚಿನ ವರ್ಷಗಳಲ್ಲಿ ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ಬಣ್ಣದ ಲೋಕಕ್ಕೆ ಮರಳಲಿ ಅನ್ನೋದು ಅಭಿಮಾನಿಗಳ ಕೋರಿಕೆ.



















