ಮಕ್ಕಳ ಜೊತೆ ಕೊಡಗು ಸುತ್ತಿದ ರಾಧಿಕಾ ಪಂಡಿತ್; ಇಲ್ಲಿವೆ ಸುಂದರ ಫೋಟೋಸ್

Updated on: Apr 25, 2026 | 11:47 AM

ಯಶ್ ಅವರು ರಾಮಾಯಣ ಹಾಗೂ ಟಾಕ್ಸಿಕ್ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ವಿಶ್ವದ ವಿವಿಧ ಕಡೆಗಳಲ್ಲಿ ಸುತ್ತಾಡುತ್ತಿದ್ದಾರೆ. ಈ ಸಮಯದಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಸಮ್ಮರ್ ವೆಕೇಶನ್ ತೆರಳಿದ್ದಾರೆ. ಈ ಫೋಟೋ ಗಮನ ಸೆಳೆದಿವೆ. ಮಕ್ಕಳ ಜೊತೆ ಅವರು ಹಾಯಾಗಿ ಕೊಡಗನ್ನು ಸುತ್ತಿದ್ದಾರೆ.

1 / 5
ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಸಿನಿಮಾ ಪ್ರಚಾರಕ್ಕಾಗಿ ವಿದೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಕೊಡಗಿಗೆ ತೆರಳಿದ್ದಾರೆ.

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಸಿನಿಮಾ ಪ್ರಚಾರಕ್ಕಾಗಿ ವಿದೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಕೊಡಗಿಗೆ ತೆರಳಿದ್ದಾರೆ.

2 / 5

ಕೊಡಗಿನಲ್ಲಿ ಆಯ್ರಾ ಹಾಗೂ ಯಥರ್ವ್ ಜೊತೆ ರಾಧಿಕಾ ಪಂಡಿತ್ ಅವರು ಸಮಯ ಕಳೆದಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಮಕ್ಕಳನ್ನು ಕೇರ್ ಮಾಡುವ ರೀತಿ ಎಲ್ಲರಿಗೂ ಇಷ್ಟ ಆಗಿದೆ.

3 / 5

ರಾಧಿಕಾ ಪಂಡಿತ್ ಅವರು ಗನ್ ಹಿಡಿದು ಸಖತ್ ಆಗಿ ಪೋಸ್ ಕೊಟ್ಟಿದ್ದಾರೆ. ಇದನ್ನು ನೋಡಿದ ಅನೇಕರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿ ಆ್ಯಕ್ಷನ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ.

4 / 5

ಕೊಡಗಿನಲ್ಲಿ ಕಾಫಿ ಬೆಳೆಯಲಾಗುತ್ತದೆ. ಕಾಫಿ ತೋಟದಲ್ಲಿ ನಿಂತು ರಾಧಿಕಾ ಪಂಡಿತ್ ಪೋಸ್ ಕೊಟ್ಟಿದ್ದಾರೆ. ಕಾಫಿ ಹೂವುಗಳು ಸುಂದರವಾಗಿ ಕಂಡಿವೆ.

5 / 5

ಬೇಸಿಗೆ ರಜೆಯಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಕಾಡು ಸುತ್ತಿದ್ದಾರೆ. ಈ ಮೂಲಕ ಮಕ್ಕಳಿಗೆ ಪ್ರಕೃತಿಯ ಪಾಠವನ್ನು ಅವರು ಹೇಳಿಕೊಟ್ಟಿದ್ದಾರೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us