
‘ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬ ಸುಖ, ಸಮೃದ್ಧಿಯನ್ನು ತರಲಿ. ನಿಮ್ಮ ಹಾಗೂ ನಿಮ್ಮ ಕುಟುಂಬದ ಸಂತೋಷ ಮತ್ತು ಸೌಕರ್ಯ ವೃದ್ಧಿಯಾಗಲಿ. ನಿಮ್ಮೆಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಆತ್ಮೀಯ ಶುಭಾಶಯಗಳು’ ಎಂದು ರಾಧಿಕಾ ಪಂಡಿತ್ ಹಾರೈಸಿದ್ದಾರೆ.

ಯಶ್ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಸಿನಿಮಾ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ಕುಟುಂಬಕ್ಕೆ ಸಮಯ ನೀಡುತ್ತಾರೆ. ಪತ್ನಿ ಮತ್ತು ಮಕ್ಕಳ ಜೊತೆ ಸೇರಿ ಅವರು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿ ಖುಷಿಪಟ್ಟಿದ್ದಾರೆ.

ರಾಧಿಕಾ ಪಂಡಿತ್ ಅವರಿಗೆ ಹಬ್ಬಗಳಲ್ಲಿ ವಿಶೇಷ ಆಸಕ್ತಿ. ಎಲ್ಲ ಹಬ್ಬವನ್ನು ಅವರು ಸಂಭ್ರಮದಿಂದ ಆಚರಿಸುತ್ತಾರೆ. ಅಭಿಮಾನಿಗಳಿಗಾಗಿ ಫೋಟೋಗಳನ್ನು ಪೋಸ್ಟ್ ಮಾಡುತ್ತಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಅವರು ಶುಭಾಶಯ ತಿಳಿಸಿದ್ದಾರೆ.

ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಯಶ್ ಅವರು ‘ಟಾಕ್ಸಿಕ್’, ‘ರಾಮಾಯಣ’ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಜಾಗತಿಕ ಮಟ್ಟದಲ್ಲಿ ಈ ಸಿನಿಮಾಗಳು ನಿರ್ಮಾಣ ಆಗುತ್ತಿವೆ.

ನಟನೆಯಿಂದ ರಾಧಿಕಾ ಪಂಡಿತ್ ಅವರು ಅಂತರ ಕಾಯ್ದುಕೊಂಡಿದ್ದಾರೆ. ಮತ್ತೆ ಅವರು ಮೊದಲಿನ ರೀತಿ ಸಿನಿಮಾಗಳಲ್ಲಿ ಬ್ಯುಸಿ ಆಗಬೇಕು ಎಂಬುದು ಅಭಿಮಾನಿಗಳ ಆಸೆ. ಸದ್ಯಕ್ಕೆ ರಾಧಿಕಾ ಅವರು ಕುಟುಂಬದ ಕಡೆ ಹೆಚ್ಚು ಗಮನ ಹರಿಸಿದ್ದಾರೆ.