
ರಾಗಿಣಿ ಚಂದ್ರನ್ ಅವರು ಚಿತ್ರರಂಗದ ಜೊತೆ ನಂಟು ಬೆಳೆಸಿಕೊಂಡಿದ್ದಾರೆ. ಅಲ್ಲೊಂದು, ಇಲ್ಲೊಂದು ಸಿನಿಮಾ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಡ್ಯಾನ್ಸರ್ ಆಗಿ, ಯೋಗ ಟೀಚರ್ ಆಗಿಯೂ ರಾಗಿಣಿ ಚಂದ್ರನ್ ಗುರುತಿಸಿಕೊಂಡಿದ್ದಾರೆ.

ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ಆಗಾಗ ಫೋಟೋ ಹಂಚಿಕೊಳ್ಳುತ್ತಾರೆ. ನಟಿ ರಾಗಿಣಿ ಅವರು ಕೂಡ ಸಾಮಾಜಿಕ ಜಾಲತಾಣವನ್ನು ಹೆಚ್ಚು ಬಳಕೆ ಮಾಡುತ್ತಾರೆ. ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಪೋಸ್ಟ್ ಮಾಡಿರುವ ಹೊಸ ಫೋಟೋ ವೈರಲ್ ಆಗಿದೆ.

ರಾಗಿಣಿ ಅವರು ಆಗಾಗ ಒಂದೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಾರೆ. ಅವರು ನಟಿಸಿದ ಮೊದಲ ಸಿನಿಮಾ ‘ಲಾ’. ಈ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಬಳಿಕ ಕೆಲವು ಸಿನಿಮಾಗಳಲ್ಲಿ ರಾಗಿಣಿ ನಟಿಸಿದ್ದಾರೆ.

ಈಗ ರಾಗಿಣಿ ಚಂದ್ರನ್ ಅವರು ‘ಶಾನುಭೋಗರ ಮಗಳು’ ಚಿತ್ರ ಒಪ್ಪಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಅವರು ಡಿ ಗ್ಲಾಮ್ ಲುಕ್ನಲ್ಲಿ ಗಮನ ಸೆಳೆಯಲಿದ್ದಾರೆ. ಈ ಚಿತ್ರದ ರಿಲೀಸ್ ದಿನಾಂಕಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

ಪ್ರಜ್ವಲ್ ದೇವರಾಜ್ ಹಾಗೂ ರಾಗಿಣಿ ಚಂದ್ರನ್ ಪರಸ್ಪರ ಪ್ರೀತಿಸುತ್ತಿದ್ದರು. 2014ರಲ್ಲಿ ಇವರು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಬರುತ್ತಿದ್ದಾರೆ. ಪತಿಯ ಫೋಟೋಗಳನ್ನು ರಾಗಿಣಿ ಆಗಾಗ ಹಂಚಿಕೊಳ್ಳುತ್ತಾರೆ.

ರಾಗಿಣಿ ಅವರನ್ನು ಪ್ರಜ್ವಲ್ ಬೆಂಬಲಿಸುತ್ತಾ ಬರುತ್ತಿದ್ದಾರೆ. ಪ್ರಜ್ವಲ್ ವೃತ್ತಿ ಜೀವನಕ್ಕೂ ರಾಗಿಣಿ ಬೆಂಬಲವಾಗಿ ನಿಂತಿದ್ದಾರೆ. ಇವರ ಅನ್ಯೋನ್ಯತೆ ಕಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ.
Published On - 6:30 am, Sat, 2 September 23