Updated on: Mar 20, 2024 | 11:11 AM
ನಟಿ ರಾಗಿಣಿ ದ್ವಿವೇದಿ ಅವರು ಹೊಸ ಫೋಟೋಶೂಟ್ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿ ಗಮನ ಸೆಳೆದಿವೆ. ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.
ವಸೀಮ್ ಖಾನ್ ಫ್ಯಾಷನ್ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಪ್ರಸಾದ್ ಬಿಡಪ ಅವರು ರಾಗಿಣಿ ಅವರ ಉಡುಗೆ ಆಯ್ಕೆ ಮಾಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ.
ರಾಗಿಣಿ ದ್ವಿವೇದಿ ಅವರ ಅಭಿಮಾನಿ ಬಳಗ ಸಖತ್ ದೊಡ್ಡದಿದೆ. ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ 8 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಅವರ ಫೋಟೋಗಳು ಇಷ್ಟ ಆಗಿದೆ.
ರಾಗಿಣಿ ಅವರಿಗೆ ‘ಕೆಂಪೆಗೌಡ’ ಸಿನಿಮಾ ಮೂಲಕ ಫೇಮಸ್ ಆದರು. ಆ ಬಳಿಕ ತುಪ್ಪದ ಬೆಡಗಿ ಎಂದೇ ಫೇಮಸ್ ಆದರು ಅವರು.
ರಾಗಿಣಿ ಅವರು ಪರಭಾಷೆಗಳಲ್ಲೂ ಹೆಚ್ಚು ಗುರುತಿಸಿಕೊಳ್ಳುತ್ತಿದ್ದಾರೆ. ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಸಖತ್ ಹೆಚ್ಚುತ್ತಿದೆ. ಕನ್ನಡದಲ್ಲೂ ಸಿನಿಮಾ ಮಾಡುತ್ತಿದ್ದಾರೆ.
ರಾಗಿಣಿ ದ್ವಿವೇದಿ ಅವರು ಜೀವನದಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಆದಾಗ್ಯೂ ಅವರು ತಮ್ಮ ಪ್ರಯತ್ನವನ್ನು ಮುಂದುವರಸಿಕೊಂಡು ಹೋಗುತ್ತಿದ್ದಾರೆ.