
ನಟಿ ರಾಗಿಣಿ ದ್ವಿವೇದಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ ಅವರು ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಅವುಗಳಿಗೆ ಅಭಿಮಾನಿಗಳಿಂದ ಭರ್ಜರಿ ಲೈಕ್ಸ್ ಸಿಗುತ್ತವೆ.

ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಬ್ಯುಸಿ ಆಗಿರುವ ರಾಗಿಣಿ ದ್ವಿವೇದಿ ಅವರು ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರಿಗಾಗಿ ಬಗೆಬಗೆಯಲ್ಲಿ ಫೋಟೋಶೂಟ್ ಮಾಡಿಸುತ್ತಾರೆ.

ಫಿಟ್ನೆಸ್ ಬಗ್ಗೆ ರಾಗಿಣಿ ದ್ವಿವೇದಿ ಅವರು ಹೆಚ್ಚು ಕಾಳಜಿ ವಹಿಸುತ್ತಾರೆ. ಡಯೆಟ್, ವರ್ಕೌಟ್ ಮೂಲಕ ಅವರು ಫಿಟ್ನೆಸ್ ಕಾಪಾಡಿಕೊಂಡು ಬಳುಕುವ ಬಳ್ಳಿಯಂತಾಗಿದ್ದಾರೆ.

ಇತ್ತೀಚೆಗೆ ರಾಗಿಣಿ ತುಂಬ ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಬಾತ್ ಟಬ್ನಲ್ಲಿ ಕುಳಿತು ಅವರು ಪೋಸ್ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ವೃತ್ತಿಜೀವನದಲ್ಲಿ ಅನೇಕ ಏಳು-ಬೀಳುಗಳನ್ನು ಕಂಡವರು ರಾಗಿಣಿ ದ್ವಿವೇದಿ. ವಿವಾದಗಳು ಎದುರಾದಾಗಲೂ ಕೂಡ ಅವರು ಕುಗ್ಗಿಲ್ಲ. ಮತ್ತೆ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.
Published On - 11:16 am, Mon, 24 October 22