ಸ್ವಿಮ್ಮಿಂಗ್​ಪೂಲ್​ನಲ್ಲಿ ರಾಗಿಣಿ ದ್ವಿವೇದಿ; ಪಡ್ಡೆಗಳ ನಿದ್ದೆ ಕದ್ದ ತುಪ್ಪದ ಬೆಡಗಿ

Updated on: Sep 02, 2023 | 8:54 AM

ರಾಗಿಣಿ ದ್ವಿವೇದಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು 6.7 ಲಕ್ಷ ಮಂದಿ ಫಾಲೋ ಮಾಡುತ್ತಿದ್ದಾರೆ. ಫ್ಯಾನ್ಸ್​ಗೋಸ್ಕರ ತುಪ್ಪದ ಬೆಡಗಿ ಹಲವು ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ. ಈಗ ಅವರು ಹೊಸ ಫೋಟೋ ಮೂಲಕ ಗಮನ ಸೆಳೆದಿದ್ದಾರೆ.

1 / 6
ನಟಿ ರಾಗಿಣಿ ದ್ವಿವೇದಿ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರು ಬಾಲಿವುಡ್​ಗೆ ಹೋಗೋಕೂ ರೆಡಿ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಸಾಲು ಸಾಲು ಫೋಟೋಗಳನ್ನು ಪೋಸ್ಟ್ ಮಾಡುತ್ತಾ ಇರುತ್ತಾರೆ.

2 / 6

ರಾಗಿಣಿ ದ್ವಿವೇದಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು 6.7 ಲಕ್ಷ ಮಂದಿ ಫಾಲೋ ಮಾಡುತ್ತಿದ್ದಾರೆ. ಫ್ಯಾನ್ಸ್​ಗೋಸ್ಕರ ತುಪ್ಪದ ಬೆಡಗಿ ಹಲವು ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ. ಈಗ ಅವರು ಹೊಸ ಫೋಟೋ ಮೂಲಕ ಗಮನ ಸೆಳೆದಿದ್ದಾರೆ.

3 / 6

ಸ್ವಿಮ್ಮಿಂಗ್ ಪೂಲ್​ನಲ್ಲಿ ರಾಗಿಣಿ ನಿಂತಿದ್ದಾರೆ. ಸಖತ್ ಬೋಲ್ಡ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಅವರ ಲುಕ್ ಸಾಕಷ್ಟು ಗಮನ ಸೆಳೆದಿದೆ. ಫ್ಯಾನ್ಸ್ ಇದಕ್ಕೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಈ ಫೋಟೋಗೆ ಸಾವಿರಾರು ಲೈಕ್ಸ್ ಸಿಕ್ಕಿದೆ.

4 / 6

‘ರಾಗಿಣಿ ಅವರೇ ನಿಮ್ ಹಾಟ್ ಲುಕ್​ಗೆ ಸ್ವಿಮ್ಮಿಂಗ್​ ಪೂಲ್​ನ ನೀರು ಬಿಸಿಯಾಗಿದೆ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ನಟಿಯ ಅಂದವನ್ನು ಹೊಗಳಿದ್ದಾರೆ. ಒಟ್ಟಾರೆ ಈ ಫೋಟೋ ಅಭಿಮಾನಿಗಳ ವಲಯದಲ್ಲಿ ಸಖತ್ ವೈರಲ್ ಆಗುತ್ತಿದೆ. ಸ್ಟೇಟಸ್ ಮೂಲಕವೂ ರಾಗಿಣಿ ಹಲವು ವಿಚಾರ ಹಂಚಿಕೊಳ್ಳುತ್ತಾರೆ.

5 / 6

ಮಹಿಳಾ ಪ್ರಧಾನ ಸಿನಿಮಾಗಳನ್ನೂ ರಾಗಿಣಿ ಮಾಡುತ್ತಿದ್ದಾರೆ. ಇದಕ್ಕೆ ಇನ್ನೊಂದು ಸಿನಿಮಾ ಸೇರ್ಪಡೆ ಇತ್ತೀಚೆಗೆ ಆಗಿತ್ತು. ‘ಶೀಲ’ ಹೆಸರಿನ ಸಿನಿಮಾದಲ್ಲಿ ರಾಗಿಣಿ ಮುಖ್ಯ ಭೂಮಿಕೆ ನಿಭಾಯಿಸಿದ್ದರು. ಕನ್ನಡ ಮಾತ್ರವಲ್ಲದೆ ಮಲಯಾಳಂನಲ್ಲೂ ಸಿನಿಮಾ ಮೂಡಿಬಂದಿತ್ತು.

6 / 6

ರಾಗಿಣಿ ಬಾಲಿವುಡ್​ನಲ್ಲೂ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಹಾರರ್ ಶೈಲಿಯಲ್ಲಿ ಮೂಡಿ ಬರುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ರಾಗಿಣಿ ಜೀವನದಲ್ಲಿ ಸಾಕಷ್ಟು ಏರಿಳಿತ ಉಂಟಾಗಿದೆ. ಆದರೆ, ಅವರು ಎಂದಿಗೂ ಅಂಜಿ ಹಿಂದೆ ಸರಿದಿಲ್ಲ.

Published On - 8:52 am, Sat, 2 September 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us