ಪುನೀತ್ ನಿವಾಸಕ್ಕೆ ತೆರಳಿ, ಅಶ್ವಿನಿ ಪುನೀತ್ ರಾಜ್ಕುಮಾರ್ ಜತೆ ಮಾತುಕತೆ ನಡೆಸಿದರು ರಾಹುಲ್ ಗಾಂಧಿ. ಶುಕ್ರವಾರ (ಏಪ್ರಿಲ್ 1) ಶಿವಕುಮಾರ ಶ್ರೀಗಳ 115ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 31) ತುಮಕೂರಿನ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಆ ಬಳಿಕ ಪುನೀತ್ ನಿವಾಸಕ್ಕೆ ಬಂದರು.
1 / 6
ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ತೀವ್ರ ನೋವು ತಂದಿದೆ. ರಾಹುಲ್ ಅವರು ದುಃಖ ವ್ಯಕ್ತಪಡಿಸಿದರು. ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದರು ರಾಹುಲ್ ಗಾಂಧಿ.
2 / 6
ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು.
3 / 6
ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಪುನೀತ್ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. 15ಕ್ಕೂ ಅಧಿಕ ಪೊಲೀಸರು ಪುನೀತ್ ನಿವಾಸಕ್ಕೆ ಭದ್ರತೆ ನೀಡಿದರು.
4 / 6
.ಪುನೀತ್ ನಿವಾಸಕ್ಕೆ ತೆರಳಿದ ರಾಹುಲ್ ಗಾಂಧಿ ಅವರು ಅಶ್ವಿನಿ ಪುನೀತ್ ರಾಜ್ಕುಮಾರ್ ಜತೆ ಮಾತುಕತೆ ನಡೆಸಿದರು.