Updated on:Oct 05, 2022 | 8:19 PM
ನಿತ್ಯದ ರಾಜಕೀಯ ಜಂಜಾಟದಿಂದ ದೂರವಾಗಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯ ಸುತ್ತಿದ್ದಾರೆ.
ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.
ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ನಿನ್ನೆ ವಾಸ್ತವ್ಯ ಹೂಡಿರುವ ಸೋನಿಯಾ, ರಾಹುಲ್‌ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ 3 ಗಂಟೆ ಕಾಲ ಸಫಾರಿ ಮಾಡಿ ಎಂಜಾಯ್ ಮಾಡಿದ್ದಾರೆ.
ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ಸಾಫರಿ, ಬೋಟ್ ಡ್ರೈವ್ ಹೀಗೆ ಪ್ರತ್ಯೇಕ ಪ್ಯಾಕೇಜ್ಗಳಿವೆ. ಈ ಹಿಂದೆ ಇದೇ ರೆಸಾರ್ಟ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ರಾಂತಿ ಪಡೆದಿದ್ದರು.
ಸೆಪ್ಟೆಂಬರ್ 6ರಿಂದ ಮಂಡ್ಯದಲ್ಲಿ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ ಹಾಕುವ ಸಾಧ್ಯತೆಗಳಿವೆ.
Published On - 8:15 pm, Wed, 5 October 22