ತಾಯಿ, ತಾಯ್ನೆಲ ಮತ್ತು ಭಾರತ್ ಜೋಡೋ: ಕ್ಯಾಮೆರಾ ಕಣ್ಣಲ್ಲಿ ರಾಹುಲ್-ಸೋನಿಯಾ ಪಾದಯಾತ್ರೆ
TV9 Web | Updated By: ಆಯೇಷಾ ಬಾನು
Updated on:
Oct 06, 2022 | 1:06 PM
ಸಕ್ಕರೆ ನಾಡು ಮಂಡ್ಯದಲ್ಲಿ ತಾಯಿ-ಮಗನ ಪ್ರೀತಿಯ ಕ್ಷಣಗಳನ್ನು ತೋರಿಸುವ ಅದ್ಭುತ ಚಿತ್ರವೊಂದು ಸೆರೆಯಾಗಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ತನ್ನ ತಾಯಿ ಸೋನಿಯಾ ಗಾಂಧಿ ಅವರ ಶೂಲೇಸನ್ನು ಕಟ್ಟುತ್ತಿದ್ದು ತಾಯಿ-ಮಗನ ಈ ಸುಂದರ ಫೋಟೋ ವೈರಲ್ ಆಗಿದೆ.
1 / 8
ಸಕ್ಕರೆ ನಾಡು ಮಂಡ್ಯದಲ್ಲಿ ತಾಯಿ-ಮಗನ ಪ್ರೀತಿಯ ಕ್ಷಣಗಳನ್ನು ತೋರಿಸುವ ಅದ್ಭುತ ಚಿತ್ರವೊಂದು ಸೆರೆಯಾಗಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ತನ್ನ ತಾಯಿ ಸೋನಿಯಾ ಗಾಂಧಿ ಅವರ ಶೂಲೇಸನ್ನು ಕಟ್ಟುತ್ತಿದ್ದು ತಾಯಿ-ಮಗನ ಈ ಸುಂದರ ಫೋಟೋ ವೈರಲ್ ಆಗಿದೆ.
2 / 8
2 ದಿನದ ಬ್ರೇಕ್ ಬಳಿಕ ಇಂದು ಮಂಡ್ಯ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆಯ ಪುನರಾರಂಭಗೊಂಡೆದೆ. ಪಾದಯಾತ್ರೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಜೊತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ.
3 / 8
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್‌ನಿಂದ ವಾಟರ್‌ವುಡ್ ರೆಸಾರ್ಟ್ಗೆ ಬೋಟ್ ಮೂಲಕ ಪ್ರಯಾಣ ಬೆಳೆಸಿ ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸಿ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾದರು.
4 / 8
ಭಾರತ್ ಜೋಡೋ ಯಾತ್ರೆಯಲ್ಲಿ ತಾಯಿ-ಮಗ. ಯಾತ್ರೆ ವೇಳೆ ಹಲವು ವಿಷಯಗಳ ಬಗ್ಗೆ ಚರ್ಚೆ.
5 / 8
ಪಾದಯಾತ್ರೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್.
6 / 8
ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ಕೆ.ಹೆಚ್.ಮುನಿಯಪ್ಪ, ಬಿ.ಕೆ.ಹರಿಪ್ರಸಾದ್, ಚಲುವರಾಯಸ್ವಾಮಿ, ಅಂಜಲಿ ನಿಂಬಾಳ್ಕರ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಹಲವರು ಭಾಗಿಯಾಗಿದ್ದಾರೆ.
7 / 8
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಜನರನ್ನು ಕೈ ಬೀಸಿದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಮಾಜಿ ಸಿಎಂ ಸಿದ್ದರಾಮಯ್ಯ
8 / 8
ಮಂಡ್ಯದಲ್ಲಿಂದು ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕರು, ಶಾಸಕರು, ಕಾರ್ಯಕರ್ತರು ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ದಾರೆ.
Published On - 12:57 pm, Thu, 6 October 22