ವಿಷ್ಣು ಕುಟುಂಬ ಭೇಟಿ ಮಾಡಿದ ರಜನಿಕಾಂತ್; ನಡೆದ ಚರ್ಚೆ ಏನು?

Updated on: Sep 30, 2026 | 2:52 PM

ರಜನಿಕಾಂತ್ ಹಾಗೂ ವಿಷ್ಣುವರ್ಧನ್ ಒಟ್ಟಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಬ್ಬರ ಮಧ್ಯೆ ಸಾಕಷ್ಟು ಬಾಂಧವ್ಯ ಇತ್ತು. ಈ ಗೆಳೆತನವನ್ನು ರಜನಿಕಾಂತ್ ಮರೆತಿಲ್ಲ. ಮೈಸೂರಿಗೆ ಆಗಮಿಸಿದ ವೇಳೆ ಅವರು ವಿಷ್ಣು ಕುಟುಂಬವನ್ನು ಭೇಟಿ ಮಾಡಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಅನಿರುದ್ಧ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 6
ರಜನಿಕಾಂತ್ ಅವರು ತಮ್ಮ ಮುಂಬವರು ‘ಧರ್ಮನ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದಕ್ಕಾಗಿ ಅವರು ಮೈಸೂರಿಗೆ ಆಗಮಿಸಿದ್ದಾರೆ. ಈ ವೇಳೆ ಅನಿರುದ್ಧ್ ಕುಟುಂಬವನ್ನು ರಜನಿಕಾಂತ್ ಭೇಟಿ ಮಾಡಿದ್ದಾರೆ.

ರಜನಿಕಾಂತ್ ಅವರು ತಮ್ಮ ಮುಂಬವರು ‘ಧರ್ಮನ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದಕ್ಕಾಗಿ ಅವರು ಮೈಸೂರಿಗೆ ಆಗಮಿಸಿದ್ದಾರೆ. ಈ ವೇಳೆ ಅನಿರುದ್ಧ್ ಕುಟುಂಬವನ್ನು ರಜನಿಕಾಂತ್ ಭೇಟಿ ಮಾಡಿದ್ದಾರೆ.

2 / 6

ರಜನಿಕಾಂತ್ ಜೊತೆ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅನಿರುದ್ಧ್ ಅವರು ಶೇರ್ ಮಾಡಿಕೊಂಡಿದ್ದಾರೆ.

3 / 6

ಅನಿರುದ್ಧ್ ಅವರ ಪತ್ನಿ ಕೀರ್ತಿ ವಿಷ್ಣುವರ್ಧನ್ ಕೂಡ ರಜನಿಕಾಂತ್ ಜೊತೆ ಪೋಸ್ ಕೊಟ್ಟಿದ್ದಾರೆ. ಕೀರ್ತಿ ಅವರು ಖುಷಿ ಖುಷಿಯಿಂದ ರಜನಿಕಾಂತ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

4 / 6

ಇನ್ನು, ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು. ಪತಿಯ ಗೆಳೆಯನ ಭೇಟಿ ಮಾಡಿದ ಖುಷಿ ಅವರಲ್ಲಿ ಇತ್ತು. ಭಾರತಿ ಅವರನ್ನು ಭೇಟಿ ಮಾಡಿ ರಜನಿಕಾಂತ್ ಕೂಡ ಖುಷಿಪಟ್ಟರು.

5 / 6

ರಜನಿಕಾಂತ್ ಭೇಟಿ ಹಿನ್ನೆಲೆಯ ಬಗ್ಗೆ ಅನಿರುದ್ಧ್ ಅವರು ಟಿವಿ9 ಕನ್ನಡ ಡಿಜಿಟಲ್ ಜೊತೆ ಮಾತನಾಡಿದ್ದಾರೆ. ‘ಇದೊಂದು ಸೌಹಾರ್ದಯುತ ಭೇಟಿ ಅಷ್ಟೇ, ಮತ್ತೇನು ವಿಶೇಷತೆ ಇಲ್ಲ’ ಎಂದು ವಿವರಿಸಿದರು.

6 / 6

‘ರಜನಿಕಾಂತ್ ಮೈಸೂರಿಗೆ ಬಂದ ಹಿನ್ನೆಲೆಯಲ್ಲಿ ಭೇಟಿ ಮಾಡಿದೆವು. ಮಕ್ಕಳು ರಜನಿಕಾಂತ್ ಅವರ ಆಶೀರ್ವಾದ ಪಡೆದಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ ಅನಿರುದ್ಧ್.

Published On - 2:50 pm, Wed, 30 September 26

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us