ಇಂದು ಸೋಮವಾರ (ಫೆ.27) ರಾಜ್ಯಸಭಾ ದ್ವೈ ವಾರ್ಷಿಕ ಚುನಾವಣೆ ನಡೆಯುತ್ತಿದೆ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಐವರು ಸ್ಪರ್ಧೆ ಮಾಡಿದ್ದಾರೆ. ವಿಧಾನಸೌಧದ ಮೊದಲ ಮಹಡಿಯಲ್ಲಿನ ಕೊಠಡಿ ಸಂಖ್ಯೆ 106 ರಲ್ಲಿ ಮತದಾನದ ನಡೆಯುತ್ತಿದೆ. ಮತದಾನ ಕೇಂದ್ರದಲ್ಲಿ ಸಿಸಿ ಟಿವಿ, ಬ್ಯಾರಿಕೇಡ್ ಅಳವಡಿಸಲಾಗಿದೆ.
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ 223 ಶಾಸಕರು ಮತದಾನ ಮಾಡುತ್ತಿದ್ದಾರೆ. ಚುನಾವಣಾಧಿಕಾರಿಯಾಗಿ ವಿಧಾನಸಭೆ ಕಾರ್ಯದರ್ಶಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ನಾಲ್ಕು ಸ್ಥಾನಗಳಿರುವ ಚುನಾವಣೆಗೆ ಐವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪಕ್ಷವಾರು ಸಂಖ್ಯಾ ಬಲ ನೋಡುವುದಾದರೆ ಕಾಂಗ್ರೆಸ್ 134, ಬಿಜೆಪಿ 66, ಜೆಡಿಎಸ್ 19 ಮತ್ತು ನಾಲ್ವರು ಪಕ್ಷೇತರ ಶಾಸಕರು ಮತದಾನ ಮಾಡಲಿದ್ದಾರೆ.
ಕಾಂಗ್ರೆಸ್ನ ಶಾಸಕರು ಮತ್ತು ಕೆಲ ಸಚಿವರ ನಿನ್ನೆ (ಫೆ.26) ರಾತ್ರಿ ಬೆಂಗಳೂರಿನ ಹಿಲ್ಟನ್ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದು, ಬೆಳಿಗ್ಗೆ ಮೂರು ಬಸ್ಗಳಲ್ಲಿ ವಿಧಾನಸೌಧಕ್ಕೆ ಆಗಮಿಸಿದರು.
ಈಗಾಗಲೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್. ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಆರ್ ಅಶೋಕ್ ಶಾಸಕ ಸುರೇಶ್ ಕುಮಾರ್ ಮತದಾನ ಮಾಡಿದ್ದಾರೆ.
ಬಿಜೆಪಿ ಶಾಸಕರಾದ ಮುನಿರತ್ನ, ಸುನಿಲ್ ಕುಮಾರ್ ಮತ್ತು ಅರವಿಂದ್ ಬೆಲ್ಲದ್ ಮತದಾನ ಮಾಡಿದ್ದಾರೆ.
ಬಿಜೆಪಿ ಶಾಸಕ ಸುರೇಶ್ ಕುಮಾರ್ ಮತ ಚಲಾಯಿಸಿದರು.
ಇಲ್ಲಿಯವರೆಗು 102 ಶಾಸಕರು ಮತ ಚಲಾವಣೆ ಮಾಡಿದ್ದಾರೆ.
ಚಲಾವಣೆಗೆ ತೆರಳುತ್ತಿದ್ದ ವೇಳೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಅವರಿಗೆ ಕಾಂಗ್ರೆಸ್ ಅಭ್ಯರ್ಥಿ ಜಿ.ಸಿ. ಚಂದ್ರಶೇಖರ್ ಎದುರಾದರು. ಈ ವೇಳೆ ಹೆಚ್ಡಿ ಕುಮಾರಸ್ವಾಮಿ ಹಸ್ತಲಾಘವ ಮಾಡಿ ಶುಭ ಹಾರೈಸಿದರು.
Published On - 10:53 am, Tue, 27 February 24