Kannada News » Photo gallery » Rakshit Shetty Starrer 777 Charlie Movie censor Process completed Movie gets UA Certificate
777 Charlie: ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಕಡೆಯಿಂದ ಹೊಸ ಅಪ್ಡೇಟ್
ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈಗ ಚಿತ್ರದ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಸೆನ್ಸಾರ್ ಅಂಗಳವನ್ನು ದಾಟಿದೆ.
ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ದೊಡ್ಡಮಟ್ಟದ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ನಾಯಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಮೊದಲು ಬಿಡುಗಡೆ ಆಗಿದ್ದ ಟೀಸರ್, ಪೋಸ್ಟರ್, ಸಾಂಗ್ಗಳಿಂದ ಅಭಿಮಾನಿಗಳಿಗೆ ಕೌತುಕ ಹೆಚ್ಚಿತ್ತು.
1 / 6
ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈಗ ಚಿತ್ರದ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಸೆನ್ಸಾರ್ ಅಂಗಳವನ್ನು ದಾಟಿದೆ. ಈ ಚಿತ್ರಕ್ಕೆ ಸೆನ್ಸಾರ್ ಬೋರ್ಡ್ ಯು/ಎ ಸರ್ಟಿಫಿಕೇಟ್ ನೀಡಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.
2 / 6
ಡಿಸೆಂಬರ್ 31ರಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಚಿತ್ರ ವಿಳಂಬವಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಈ ಬಗ್ಗೆ ರಕ್ಷಿತ್ ಶೆಟ್ಟಿ ಅವರು ಟ್ವೀಟ್ ಮಾಡುವ ಮೂಲಕ ಮಾಹಿತಿ ತಿಳಿಸಿದ್ದರು. ಈಗ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಮುಗಿದಿರುವುದರಿಂದ ಶೀಘ್ರವೇ ಚಿತ್ರ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.
3 / 6
‘777 ಚಾರ್ಲಿಯ ಈ ಸುದೀರ್ಘ ಪಯಣದಲ್ಲಿ ನೀವು ನಮಗೆ ತೋರಿರುವ ಪ್ರೀತಿ ಹಾಗು ಬೆಂಬಲಕ್ಕೆ ನಾವು ಆಭಾರಿ. ನಾವು ಈ ಮೂಲಕ ತಿಳಿಸ ಬಯಸುವುದೇನೆಂದರೆ, ನಮ್ಮ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಮೊದಲು ನಿಗದಿಪಡಿಸಲಾಗಿದ್ದ ದಿನಾಂಕವಾದ 31 ಡಿಸೆಂಬರ್ 2021 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ’ ಎಂದು ರಕ್ಷಿತ್ ಈ ಮೊದಲು ಬರೆದುಕೊಂಡಿದ್ದರು.
4 / 6
ಕಿರಣ್ ರಾಜ್ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್ ಬಿ. ಶೆಟ್ಟಿ, ದಾನಿಶ್ ಸೇಟ್ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.
5 / 6
ಪರಮ್ವಾ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಚಿತ್ರ ಮೂಡಿ ಬರುತ್ತಿದೆ. ಹೊಸ ರಿಲೀಸ್ ಡೇಟ್ಗಾಗಿ ಅಭಿಮಾನಿಗಳು ಕಾದಿದ್ದಾರೆ.