- Kannada News Photo gallery Kannada News | Rakul Preet Singh shares white gown photos from IIFA awards 2023
Rakul Preet Singh: ಏಕಾಏಕಿ ಟ್ರೆಂಡ್ ಆದ ರಕುಲ್ ಪ್ರೀತ್ ಸಿಂಗ್; ವಿದೇಶಕ್ಕೆ ಹೋಗಿ ಮಿಂಚಿದ ಸುಂದರಿ
IIFA awards 2023: ಬಿಳಿ ಗೌನ್ ಧರಿಸಿದ ಅವರು ಬಿಂದಾಸ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
Updated on: May 27, 2023 | 7:36 PM

ನಟಿ ರಕುಲ್ ಪ್ರೀತ್ ಸಿಂಗ್ ಅವರು ಹಲವು ಭಾಷೆಯ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್ನಲ್ಲಿ ಅವರಿಗೆ ಸಖತ್ ಬೇಡಿಕೆ ಇದೆ. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಏಕಾಏಕಿ ಟ್ರೆಂಡ್ ಆಗಿದ್ದಾರೆ.

ರಕುಲ್ ಪ್ರೀತ್ ಸಿಂಗ್ ಅವರು ಟ್ರೆಂಡ್ ಆಗಲು ಕಾರಣ ಏನು? ಉತ್ತರ ಸಿಂಪಲ್. ಬಿಳಿ ಗೌನ್ ಧರಿಸಿದ ಅವರು ಬಿಂದಾಸ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಅಬುಧಾಬಿಯಲ್ಲಿ ‘ಐಫಾ ಅವಾರ್ಡ್ಸ್’ ಕಾರ್ಯಕ್ರಮ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗವಹಿಸಿದ್ದಾರೆ. ರುಕುಲ್ ಪ್ರೀತ್ ಸಿಂಗ್ ಕೂಡ ಈ ಕಾರ್ಯಕ್ರಮದ ಸಲುವಾಗಿ ವಿದೇಶಕ್ಕೆ ಹಾರಿದ್ದಾರೆ. ಅಲ್ಲಿನ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ರಕುಲ್ ಪ್ರೀತ್ ಸಿಂಗ್ ಅವರು ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು ಬರೋಬ್ಬರಿ 23 ಮಿಲಿಯನ್ ಜನರು ಫಾಲೋ ಮಾಡುತ್ತಿದ್ದಾರೆ.

ರಕುಲ್ ಪ್ರೀತ್ ಸಿಂಗ್ ಮೊದಲು ನಟಿಸಿದ್ದು ಕನ್ನಡದ ‘ಗಿಲ್ಲಿ’ ಚಿತ್ರದಲ್ಲಿ. ಆ ಬಳಿಕ ಅವರು ತೆಲುಗು, ತಮಿಳು ಮತ್ತು ಹಿಂದಿ ಭಾಷೆಯ ಸಿನಿಮಾಗಳಲ್ಲಿ ಬ್ಯುಸಿ ಆದರು. ಹಲವು ಸ್ಟಾರ್ ನಟರ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಪ್ರಸ್ತುತ ಅನೇಕ ಪ್ರಾಜೆಕ್ಟ್ಗಳಲ್ಲಿ ಬ್ಯುಸಿ ಆಗಿದ್ದಾರೆ.




