Upasana Kamineni: ದುಬೈನಲ್ಲಿ ಉಪಾಸನಾಗೆ ಸೀಮಂತ ಶಾಸ್ತ್ರ; ಇಲ್ಲಿವೆ ಫೋಟೋಸ್
ಉಪಾಸನಾಗೆ ಸೀಮಂತ ಶಾಸ್ತ್ರ ಮಾಡಲಾಗಿದೆ. ಇದಕ್ಕಾಗಿ ದಂಪತಿ ದುಬೈಗೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Updated on: Apr 06, 2023 | 2:25 PM

ನಟ ರಾಮ್ ಚರಣ್ ಹಾಗೂ ಉಪಾಸನಾ ತಂದೆ-ತಾಯಿ ಆಗುತ್ತಿರುವ ಖುಷಿಯಲ್ಲಿದ್ದಾರೆ. ಶೀಘ್ರವೇ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗಲಿದೆ. ಈ ವಿಚಾರವನ್ನು ಅವರು ಇತ್ತೀಚೆಗೆ ಘೋಷಣೆ ಮಾಡಿದ್ದರು.

ಈಗ ಉಪಾಸನಾಗೆ ಸೀಮಂತ ಶಾಸ್ತ್ರ ಮಾಡಲಾಗಿದೆ. ಇದಕ್ಕಾಗಿ ದಂಪತಿ ದುಬೈಗೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಮ್ ಚರಣ್ ತಂದೆ ಆಗುತ್ತಿರುವ ವಿಚಾರವನ್ನು ಕಳೆದ ವರ್ಷ ಘೋಷಣೆ ಮಾಡಿದ್ದರು. ಇನ್ನು ಕೆಲವೇ ವಾರಗಳಲ್ಲಿ ಅವರ ಹೆಗಲಿಗೆ ಹೊಸ ಜವಾಬ್ದಾರಿ ಬರಲಿದೆ.

ರಾಮ್ ಚರಣ್ ಹಾಗೂ ಉಪಾಸನಾ ಜೊತೆ ಕುಟುಂಬದವರು ಕೂಡ ದುಬೈಗೆ ಬಂದಿದ್ದಾರೆ. ಅವರು ಕೂಡ ಈ ವಿಶೇಷ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ.

ರಾಮ್ ಚರಣ್ ಅವರು ಉಪಾಸನಾಗೋಸ್ಕರ ವಿಶೇಷ ಕೇಕ್ ಮಾಡಿಸಿದ್ದರು. ಈ ಕೇಕ್ ಎಲ್ಲರ ಗಮನ ಸೆಳೆದಿದೆ. ಬೇಬಿ ಶವರ್ ಸಖತ್ ಅದ್ದೂರಿಯಾಗಿ ನಡೆದಿದೆ. ಎಲ್ಲರೂ ಉಪಾಸನಾಗೆ ಮುಂಚಿತವಾಗಿ ಶುಭಾಶಯ ತಿಳಿಸುತ್ತಿದ್ದಾರೆ.

ರಾಜೇಶ್ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



