- Kannada News Photo gallery Ramayana actress Sai Pallavi visits Annapurna temple in Varanasi Entertainment News in Kannada
ಕಾಶಿ ಅನ್ನಪೂರ್ಣ ದೇವಸ್ಥಾನಕ್ಕೆ ಭೇಟಿ ನೀಡಿದ ನಟಿ ಸಾಯಿ ಪಲ್ಲವಿ
ಖ್ಯಾತ ನಟಿ ಸಾಯಿ ಪಲ್ಲವಿ ಅವರು ಹಲವು ಪ್ರಾಜೆಕ್ಟ್ಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆ ಅವರು ಬಿಡುವು ಮಾಡಿಕೊಂಡು ವಾರಾಣಸಿಗೆ ತೆರಳಿದ್ದಾರೆ. ಅಲ್ಲಿನ ಅನ್ನಪೂರ್ಣ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಾಯಿ ಪಲ್ಲವಿ ಅವರ ಈ ಫೋಟೋಗಳು ವೈರಲ್ ಆಗಿವೆ.
Updated on: Dec 23, 2024 | 3:27 PM

ಅನ್ನಪೂರ್ಣ ದೇವಸ್ಥಾನಕ್ಕೆ ಸಾಯಿ ಪಲ್ಲವಿ ಅವರು ಇಂದು (ಡಿ.23) ಭೇಟಿ ನೀಡಿದ್ದಾರೆ. ಅವರ ಸರಳತೆ ಫ್ಯಾನ್ಸ್ ಯಾವಾಗಲೂ ಫಿದಾ ಆಗುತ್ತಾರೆ. ಮೇಕಪ್ ಇಲ್ಲದೇ ಸುಂದರವಾಗಿ ಕಾಣಿಸಿಕೊಳ್ಳುವ ಸಾಯಿ ಪಲ್ಲವಿ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ.

ಈ ವರ್ಷ ‘ಅಮರನ್’ ಸಿನಿಮಾ ಸೂಪರ್ ಹಿಟ್ ಆಯಿತು. ಆ ಗೆಲುವಿನ ಖುಷಿಯಲ್ಲಿ ಸಾಯಿ ಪಲ್ಲವಿ ತೇಲುತ್ತಿದ್ದಾರೆ. ಈ ಚಿತ್ರದಲ್ಲಿ ಅವರ ನಟನೆಗೆ ಎಲ್ಲರಿಂದಲೂ ಮೆಚ್ಚುಗೆ ಸಿಕ್ಕಿದೆ. ‘ಅಮರನ್’ ಯಶಸ್ಸಿನ ಬಳಿಕ ಸಾಯಿ ಪಲ್ಲವಿ ಅವರಿಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ.

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಾಯಿ ಪಲ್ಲವಿ ಅವರಿಗೆ ಬೇಡಿಕೆ ಇದೆ. ಸಿನಿಮಾದ ಕೆಲಸಗಳ ಬಿಡುವಿನಲ್ಲಿ ಅವರು ಕಾಶಿಯ ಅನ್ನಪೂರ್ಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ. ಸಿಂಪಲ್ ಆಗಿ ಕಾಣಿಸಿಕೊಂಡ ಸಾಯಿ ಪಲ್ಲವಿ ಅವರ ಫೋಟೋಸ್ ವೈರಲ್ ಆಗಿವೆ.

ಬಾಲಿವುಡ್ನಲ್ಲಿ ತಯಾರಾಗುತ್ತಿರುವ ‘ರಾಮಾಯಣ’ ಸಿನಿಮಾದಲ್ಲಿ ಸಾಯಿ ಪಲ್ಲವಿ ಅವರು ಸೀತೆಯ ಪಾತ್ರ ಮಾಡುತ್ತಿದ್ದಾರೆ. ರಾಮನಾಗಿ ಕಾಣಿಸಿಕೊಳ್ಳುತ್ತಿರುವ ರಣಬೀರ್ ಕಪೂರ್ಗೆ ಸಾಯಿ ಪಲ್ಲವಿ ಜೋಡಿ ಆಗಿದ್ದಾರೆ. ಈ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ.

ನಾಗ ಚೈತನ್ಯ ಜೊತೆ ಸಾಯಿ ಪಲ್ಲವಿ ನಟಿಸಿರುವ ‘ತಂಡೇಲ್’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಕಾರಣಾಂತರಗಳಿಂದ ಈ ಸಿನಿಮಾದ ರಿಲೀಸ್ ತಡವಾಗಿದೆ.




