ದೇವೆಗೌಡರಿಂದ ಬಿ ಫಾರಂ ಸ್ವೀಕರಿಸುವಾಗ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ

|

Updated on: Apr 17, 2023 | 1:56 PM

ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಚನ್ನಪಟ್ಟಣದ ಅಭ್ಯರ್ಥಿ ಹೆಚ್​ ಡಿ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಲು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರಿಂದ ಬಿ ಫಾರ್ಮ್ ಪಡೆದುಕೊಂಡರು. ಅಜ್ಜನಿಂದ ಬಿ ಫಾರ್ಮ್ ಪಡೆದುಕೊಳ್ಳುವ ವೇಳೆ ನಿಖಿಲ್​ ಕುಮಾರಸ್ವಾಮಿ ಕಣ್ಣೀರಿಟ್ಟಿದ್ದಾರೆ.

1 / 6
ರಾಮನಗರ ಜೆಡಿಎಸ್​ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರ ಬಳಿ ಬಿ ಫಾರ್ಮ್ ಪಡೆದುಕೊಂಡರು.

2 / 6
ರಾಮನಗರ ಜೆಡಿಎಸ್‌ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬಿ ಫಾರ್ಮ್ ಪಡೆದುಕೊಳ್ಳುವ ವೇಳೆ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

3 / 6
ತಂದೆ ಹೆಚ್​.ಡಿ.ಕುಮಾರಸ್ವಾಮಿ, ತಾಯಿ ಅನಿತಾ ಕುಮಾರಸ್ವಾಮಿ ಅವರ ಜತೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಮಾಜಿ ಪ್ರಧಾನಿ ದೇವೇಗೌಡ ಅವರಿಂದ ಬಿ ಫಾರ್ಮ್ ಪಡೆದುಕೊಂಡರು.

4 / 6
ಇದೇ ವೇಳೆ ಅಜ್ಜಿ ಚೆನ್ನಮ್ಮ ಅವರಿಗೆ ಕಾಲು ಮುಗಿದ ಆಶೀರ್ವಾದ ಪಡೆದುಕೊಂಡಿದ್ದು, ಈ ವೇಳೆ ಪತ್ನಿ ರೇವತಿ ಸಹ ಇದ್ದರು.

5 / 6
ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚರ್ಚ್ ಹಾಗೂ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ನಾಮಪತ್ರ ಸಲ್ಲಿಸಲಿದ್ದಾರೆ,

6 / 6
ಇದೇ ವೇಳೆ ಹೆಚ್​ಡಿ ಕುಮಾರಸ್ವಾಮಿ ಅವರು ಸಹ ಚನ್ನಪಟ್ಟಣ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ತಂದೆಯಿಂದ ಬಿ ಫಾರ್ಮ್ ಪಡೆದುಕೊಂಡರು.

Published On - 1:54 pm, Mon, 17 April 23