Updated on:Jun 19, 2023 | 10:27 PM
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಇಂದು (ಜೂನ್ 19) ಜನ್ಮದಿನ. ಈ ಪ್ರಯುಕ್ತ ಅವರಿಗೆ ಅನೇಕರು ವಿಶ್ ಮಾಡಿದ್ದಾರೆ. 53ನೇ ವಸಂತಕ್ಕೆ ಕಾಲಿಟ್ಟಿರುವ ರಾಹುಲ್ ಗಾಂಧಿ ಅವರಿಗೆ ಅನೇಕ ಸೆಲೆಬ್ರಿಟಿಗಳು ಸಹ ಶುಭ ಕೋರಿದ್ದಾರೆ.
ನಟಿ ರಮ್ಯಾ ಅವರು ರಾಹುಲ್ ಗಾಂಧಿ ಜೊತೆಗೆ ಇರುವ ಫೋಟೋ ಹಂಚಿಕೊಂಡಿದ್ದಾರೆ. ಅವರ ಬಗ್ಗೆ ವಿಶೇಷವಾದ ಮಾತುಗಳನ್ನು ರಮ್ಯಾ ಬರೆದುಕೊಂಡಿದ್ದಾರೆ. ಈ ಫೋಟೋಗಳಿಗೆ ಅವರು ನೀಡಿದ ಕ್ಯಾಪ್ಷನ್ ಗಮನ ಸೆಳೆಯುತ್ತಿದೆ.
‘ನನ್ನ ಮುಖದಲ್ಲಿ ಮತ್ತೆ ನಗು ಮೂಡಿಸಿದ ವ್ಯಕ್ತಿ’ ಎಂದು ರಾಹುಲ್ ಗಾಂಧಿ ಅವರನ್ನು ಬಣ್ಣಿಸಿದ್ದಾರೆ ರಮ್ಯಾ ದಿವ್ಯ ಸ್ಪಂದನಾ. ಈ ಮೊದಲು ಕಾಂಗ್ರೆಸ್ ಪಕ್ಷದ ಐಟಿ ಸೆಲ್ನಲ್ಲಿ ರಮ್ಯಾ ಅವರು ಕೆಲಸ ಮಾಡಿ ಗಮನ ಸೆಳೆದಿದ್ದರು.
‘ಕರುಣೆಯ ಕಣ್ಣುಗಳಿಂದ ಜಗತ್ತನ್ನು ನೋಡಲು ಕಲಿಸಿದವರು’ ಎಂದು ಕೂಡ ರಮ್ಯಾ ಹೇಳಿದ್ದಾರೆ. ಆ ಮೂಲಕ ಅವರ ರಾಹುಲ್ ಗಾಂಧಿಗೆ ಹುಟ್ಟುಹಬ್ಬದ ವಿಶ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್ ಆಗಿವೆ.
ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ರಮ್ಯಾ ಅವರು ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಜೊತೆ ಅವರು ಕೈ ಜೋಡಿಸಿದ್ದಾರೆ. ಈಗ ಅವರು ರಾಜಕೀಯದಿಂದ ಸ್ವಲ್ಪ ಅಂತರ ಕಾಯ್ದುಕೊಂಡು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.
Published On - 10:26 pm, Mon, 19 June 23