Rashmika Mandanna Birthday: ‘ಪುಷ್ಪ 2’ ತಂಡದಿಂದ ಹೊಸ ಪೋಸ್ಟರ್ ರಿಲೀಸ್, ಹೇಗಿದ್ದಾಳೆ ನೋಡಿ ಶ್ರೀವಲ್ಲಿ
ಇಂದು (ಏಪ್ರಿಲ್ 5) ರಶ್ಮಿಕಾ ಮಂದಣ್ಣ ಅವರ ಬರ್ತ್ಡೇ. ಈ ಪ್ರಯುಕ್ತ ರಶ್ಮಿಕಾ ನಟನೆಯ ಹೊಸ ಸಿನಿಮಾಗಳ ಪೋಸ್ಟರ್ ರಿಲೀಸ್ ಆಗುತ್ತಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.
Updated on: Apr 05, 2023 | 2:07 PM

ಇಂದು (ಏಪ್ರಿಲ್ 5) ರಶ್ಮಿಕಾ ಮಂದಣ್ಣ ಅವರ ಬರ್ತ್ಡೇ. ಈ ಪ್ರಯುಕ್ತ ರಶ್ಮಿಕಾ ನಟನೆಯ ಹೊಸ ಸಿನಿಮಾಗಳ ಪೋಸ್ಟರ್ ರಿಲೀಸ್ ಆಗುತ್ತಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ರಶ್ಮಿಕಾ ಜನಪ್ರಿಯತೆ ಹೆಚ್ಚಿತು. ಈ ಚಿತ್ರದಲ್ಲಿ ಶ್ರೀವಲ್ಲಿ ಹೆಸರಿನ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಈಗ ಈ ಚಿತ್ರದ ಸೀಕ್ವೆಲ್ಗೆ ಸಿದ್ಧತೆ ನಡೆದಿದೆ.

‘ಪುಷ್ಪ 2’ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಶ್ರೀವಲ್ಲಿ ಸೀರೆ ಉಟ್ಟು ಮಿಂಚಿದ್ದಾಳೆ. ರಶ್ಮಿಕಾ ಗ್ಲಾಮರ್ ಹೆಚ್ಚಿದೆ.

ರಶ್ಮಿಕಾ ಮಂದಣ್ಣ ಅವರು ನಿತಿನ್ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ವೆಂಕಿ ಕುದುಮುಲ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಭೀಷ್ಮ’ ಸಿನಿಮಾ ಬಳಿಕ ಈ ಮೂವರು ಹೊಸ ಚಿತ್ರಕ್ಕೆ ಮತ್ತೆ ಒಂದಾಗಿದ್ದಾರೆ. ಈ ಸಿನಿಮಾದ ಪೋಸ್ಟರ್ ಕೂಡ ರಿಲೀಸ್ ಆಗಿದೆ.

‘ರೇನ್ಬೋ’ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಇದು ಮಹಿಳಾ ಪ್ರಧಾನ ಸಿನಿಮಾ. ಈ ಚಿತ್ರದ ಬಗ್ಗೆ ಇನ್ನಷ್ಟೇ ಅಪ್ಡೇಟ್ ಸಿಗಬೇಕಿದೆ.

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.
Read More




