Updated on: May 22, 2022 | 11:22 AM
ನಟಿ ರಶ್ಮಿಕಾ ಮಂದಣ್ಣ ಅವರು ಸಖತ್ ಬ್ಯುಸಿ ಆಗಿದ್ದಾರೆ. ಹತ್ತು ಹಲವು ಪ್ರಾಜೆಕ್ಟ್ಗಳು ಅವರ ಕೈಯಲ್ಲಿವೆ. ಈ ನಡುವೆ ಅವರು ಹುಟ್ಟೂರಾದ ಕೊಡಗಿಗೆ ಬಂದಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಅಭಿಮಾನಿಗಳಿಗಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಸ್ನೇಹಿತೆಯ ಮದುವೆಗಾಗಿ ರಶ್ಮಿಕಾ ಮಂದಣ್ಣ ಕೊಡಗಿಗೆ ಬಂದಿದ್ದಾರೆ. ಈ ವೇಳೆ ಅವರು ಕೊಡವ ಶೈಲಿಯಲ್ಲಿ ಸೀರೆ ಧರಿಸಿ ಮಿಂಚಿಸಿದ್ದಾರೆ. ಹಸಿರು ಬಣ್ಣದ ಈ ಸೀರೆಯಲ್ಲಿ ಅವರನ್ನು ನೋಡಿ ಅಭಿಮಾನಿಗಳು ಖುಷಿ ಆಗಿದ್ದಾರೆ. ಕಮೆಂಟ್ಗಳ ಮೂಲಕ ಜನರು ಮೆಚ್ಚುಗೆ ಸೂಚಿಸಿದ್ದಾರೆ.
ರಶ್ಮಿಕಾ ಈಗ ಬಹುಭಾಷೆಯಲ್ಲಿ ಫೇಮಸ್ ಆಗಿದ್ದಾರೆ. ಹಾಗಾಗಿ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ಕೋಟ್ಯಂತರ ಜನರು ಫಾಲೋ ಮಾಡುತ್ತಾರೆ. ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ರಶ್ಮಿಕಾ ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಏನಾದರೂ ಪೋಸ್ಟ್ ಮಾಡುತ್ತಾ ಇರುತ್ತಾರೆ.
ಕೊಡವ ಶೈಲಿಯಲ್ಲಿ ಸೀರೆ ಧರಿಸಿ ರಶ್ಮಿಕಾ ಮಂದಣ್ಣ ಹಂಚಿಕೊಂಡಿರುವ ಈ ಫೋಟೋ ಅವರ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ. ಕೆಲವೇ ಗಂಟೆಗಳು ಕಳೆಯುವುದರೊಳಗೆ ಈ ಫೋಟೋಗೆ ಬರೋಬ್ಬರಿ 17 ಲಕ್ಷಕ್ಕೂ ಅಧಿಕ ಮಂದಿ ಲೈಕ್ ಬಟನ್ ಒತ್ತಿದ್ದಾರೆ.
ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಿರುವುದರಿಂದ ರಶ್ಮಿಕಾ ಮಂದಣ್ಣ ಅವರಿಗೆ ಫ್ಯಾಮಿಲಿ ಜೊತೆ ಸಮಯ ಕಳೆಯಲು ಕೂಡ ಬಿಡುವು ಸಿಗುತ್ತಿಲ್ಲ. ಆದರೆ ಬಾಲ್ಯದ ಸ್ನೇಹಿತೆಯ ಮದುವೆಗಾಗಿ ಅವರು ಬಿಡುವು ಮಾಡಿಕೊಂಡು ಕೊಡಗಿಗೆ ಬಂದಿದ್ದಾರೆ. ಎಲ್ಲರ ಜತೆ ಖುಷಿಗಾಗಿ ಕಾಲ ಕಳೆದಿದ್ದಾರೆ.