
ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಫೆಬ್ರವರಿ ಎರಡನೇ ವಾರದಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿದೆ. ಇದಕ್ಕೆ ರಶ್ಮಿಕಾ ಕಡೆಯಿಂದ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

ರಶ್ಮಿಕಾ ಮಂದಣ್ಣ ಅವರು ಇನ್ಸ್ಟಾಗ್ರಾಮ್ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಎಲ್ಲಿಯೂ ನಿಶ್ಚಿತಾರ್ಥದ ವಿಚಾರಕ್ಕೆ ಸ್ಪಷ್ಟನೆ ನೀಡುವ ಗೋಜಿಗೆ ಹೋಗಿಲ್ಲ.

‘ಅನಿಮಲ್’ ತಂಡ ಇತ್ತೀಚೆಗೆ ಮುಂಬೈನಲ್ಲಿ ಸಕ್ಸಸ್ ಪಾರ್ಟಿ ಆಚರಿಸಿಕೊಂಡಿದೆ. ಈ ಸಂದರ್ಭದಲ್ಲಿ ತೆಗೆದ ಫೋಟೋಗಳನ್ನು ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ವೈರಲ್ ಆಗಿದೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರದ್ದು ಹಿಟ್ ಜೋಡಿ. ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲಿ ಇಬ್ಬರೂ ಜೊತೆಯಾಗಿ ನಟಿಸಿ ಗಮನ ಸೆಳೆದಿದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ದಿನ ಕಳೆದಂತೆ ಬೇಡಿಕೆ ಹೆಚ್ಚುತ್ತಿದೆ. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು ನಾಲ್ಕು ಕೋಟಿಗೂ ಅಧಿಕ ಜನರು ಹಿಂಬಾಲಿಸುತ್ತಿದ್ದಾರೆ. ಇದು ಅವರ ಜನಪ್ರಿಯತೆಗೆ ಹಿಡಿದ ಕೈಗನ್ನಡಿ ಆಗಿದೆ.

ರಶ್ಮಿಕಾ ಮಂದಣ್ಣ ‘ಅನಿಮಲ್’ ಸಿನಿಮಾ ಗೆಲುವಿನ ಬಳಿಕ ‘ಪುಷ್ಪ 2’ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದಾರೆ. ಇನ್ನೂ ಕೆಲವು ಚಿತ್ರಗಳನ್ನು ಒಪ್ಪಿ ನಟಿಸುತ್ತಿದ್ದಾರೆ.