Rashmika Mandanna: 3.8 ಕೋಟಿಗೆ ಏರಿತು ರಶ್ಮಿಕಾ ಮಂದಣ್ಣ ಹಿಂಬಾಲಕರ ಸಂಖ್ಯೆ; ಇನ್ಸ್ಟಾಗ್ರಾಮ್ನಲ್ಲಿ ಇವರದ್ದೇ ಹವಾ
Rashmika Mandanna Instagram: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಅವರ ಜನಪ್ರಿಯತೆ ಗಣನೀಯವಾಗಿ ಹೆಚ್ಚಾಗುತ್ತಿದೆ.
Updated on: May 01, 2023 | 7:00 AM

ದಿನದಿಂದ ದಿನಕ್ಕೆ ನಟಿ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚುತ್ತಿದೆ. ಅದಕ್ಕೆ ತಕ್ಕಂತೆಯೇ ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ಕೂಡ ದೊಡ್ಡದಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಅಪ್ಡೇಟ್.

ಇನ್ಸ್ಟಾಗ್ರಾಮ್ನಲ್ಲಿ ರಶ್ಮಿಕಾ ಮಂದಣ್ಣ ಅವರು ಸಕ್ರಿಯರಾಗಿದ್ದಾರೆ. ಆಗಾಗ ಅವರು ಹೊಸ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಆ ಮೂಲಕ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುತ್ತಾರೆ.

ಬಹುಭಾಷೆಯಲ್ಲಿ ನಟಿಸುತ್ತಿರುವ ರಶ್ಮಿಕಾ ಮಂದಣ್ಣ ಅವರಿಗೆ ಎಲ್ಲ ರಾಜ್ಯದಲ್ಲೂ ಅಭಿಮಾನಿಗಳಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು ಬರೋಬ್ಬರಿ 3.8 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ. ಇದು ನಟಿಯ ಖುಷಿಗೆ ಕಾರಣ ಆಗಿದೆ.

‘ಪುಷ್ಪ’ ಸಿನಿಮಾದಲ್ಲಿ ನಟಿಸಿದ ಬಳಿಕ ರಶ್ಮಿಕಾ ಮಂದಣ್ಣ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡರು. ಅವರು ಮಾಡಿದ ಶ್ರೀವಲ್ಲಿ ಪಾತ್ರ ಹೈಲೈಟ್ ಆಯಿತು. ಈಗ ಅವರು ‘ಪುಷ್ಪ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಬಾಲಿವುಡ್ನಲ್ಲೂ ರಶ್ಮಿಕಾ ಮಂದಣ್ಣ ಅವರಿಗೆ ಬೇಡಿಕೆ ಇದೆ. ಸಿದ್ದಾರ್ಥ್ ಮಲ್ಹೋತ್ರಾ ಜೊತೆ ಅವರು ನಟಿಸಿದ ‘ಮಿಷನ್ ಮಜ್ನು’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಎನಿಸಿಕೊಂಡಿತು. ಹೊಸ ಆಫರ್ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.



















