ಹೊಸ ಗೆಟಪ್ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ
ಮೋಷನ್ ಪೋಸ್ಟರ್ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ.
Updated on: Apr 05, 2022 | 4:55 PM
Share

ನಟಿ ರಶ್ಮಿಕಾ ಮಂದಣ್ಣ ಅವರು ಬಣ್ಣದ ಲೋಕದಲ್ಲಿ ವೇಗದಲ್ಲಿ ಮುನ್ನುಗ್ಗುತ್ತಿದ್ದಾರೆ. ನಾನಾ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಪ್ರೇಕ್ಷಕರಿಂದ ಭೇಷ್ ಎನಿಸಿಕೊಳ್ಳುತ್ತಿದ್ದಾರೆ. ಇಂದು (ಏಪ್ರಿಲ್ 5) ಅವರ ಜನ್ಮದಿನ. ಈ ಪ್ರಯುಕ್ತ ಅವರ ಹೊಸ ಸಿನಿಮಾ ಒಂದು ಘೋಷಣೆ ಆಗಿದೆ.



ಈಗ ಹನು ರಾಘವಪುಡಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಭಿನ್ನ ಗೆಟಪ್ ತಾಳಿದ್ದಾರೆ. ಈ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ದುಲ್ಖರ್ ಸಲ್ಮಾನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಮೋಷನ್ ಪೋಸ್ಟರ್ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ. ಲಂಡನ್ನ ಖ್ಯಾತ ಬಿಗ್ ಬೇನ್ ಗಡಿಯಾರ ಕೂಡ ಪೋಸ್ಟರ್ನಲ್ಲಿದೆ. ಈ ಎಲ್ಲಾ ಕಾರಣಕ್ಕೆ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.
Related Photo Gallery
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ




