
ರಶ್ಮಿಕಾ ಮಂದಣ್ಣ ಅವರು ಇಂದು (ಏಪ್ರಿಲ್ 5) ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಕಡೆಯಿಂದ ಶುಭಾಶಯ ಬರುತ್ತಿದೆ.

ರಶ್ಮಿಕಾ ಮಂದಣ್ಣ ಅವರು 20ನೇ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟರು. ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಪಡೆದರು.

ರಶ್ಮಿಕಾ ಮಂದಣ್ಣ ಅವರು ಜನಿಸಿದ್ದು ಏಪ್ರಿಲ್ 5, 1996ರಲ್ಲಿ. ಅವರಿಗೆ ಈಗ 27 ವರ್ಷ ವಯಸ್ಸು. ಸಣ್ಣ ವಯಸ್ಸಿನಲ್ಲಿ ಸ್ಟಾರ್ ಪಟ್ಟ ಪಡೆದು ರಶ್ಮಿಕಾ ಮಿಂಚುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ವೈಯಕ್ತಿಕ ಜೀವನ ಕೂಡ ಸಾಕಷ್ಟು ಚರ್ಚೆ ಆಗುತ್ತಿರುತ್ತದೆ. ಅವರು ಮೊದಲು ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು. ಅದು ಮುರಿದುಬಿತ್ತು. ಆ ಬಳಿಕ ಅವರು ವಿಜಯ್ ದೇವರಕೊಂಡ ಜೊತೆ ಸುತ್ತಾಟ ನಡೆಸಿದ್ದಾರೆ ಎನ್ನಲಾಗಿದೆ.

ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ಸದ್ಯ ನಾಲ್ಕು ಸಿನಿಮಾಗಳಿವೆ. ‘ಪುಷ್ಪ 2’, ‘ಅನಿಮಲ್’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈ ಪೈಕಿ ಒಂದು ಹಿಂದಿ ಸಿನಿಮಾ ಹಾಗೂ ಮೂರು ತೆಲುಗು ಸಿನಿಮಾ.