
ನಟಿ ರಶ್ಮಿಕಾ ಮಂದಣ್ಣ ಅವರು ಸಾಕಷ್ಟು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಅವರು ಹೊಸ ಹೊಸ ಫೋಟೋಶೂಟ್ ಮಾಡಿಸುತ್ತಾರೆ. ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಫ್ಯಾನ್ಸ್ಗೆ ಟ್ರೀಟ್ ಕೊಡುತ್ತಾರೆ.

ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಕಪ್ಪು-ಬಿಳುಪಿನ ಫೋಟೋ ಇದಾಗಿದ್ದು, ಸಖತ್ ಬೋಲ್ಡ್ ಆಗಿದೆ. ಫೋಟೋ ನೋಡಿದ ಅವರ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಸಿನಿಮಾ ಕೆಲಸಗಳ ಜತೆಗೆ ಸಾಕಷ್ಟು ಬ್ರ್ಯಾಂಡ್ಗಳಿಗೆ ರಾಯಭಾರಿ ಆಗಿದ್ದಾರೆ. ಇದಕ್ಕಾಗಿಯೂ ರಶ್ಮಿಕಾ ಮಂದಣ್ಣ ಅವರು ಫೋಟೋಶೂಟ್ ಮಾಡಿಸುತ್ತಾರೆ.

ರಶ್ಮಿಕಾ ಕೈಯಲ್ಲಿ ಹಲವು ಪ್ರಾಜೆಕ್ಟ್ಗಳಿವೆ. ರಶ್ಮಿಕಾ ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ ಇದೇ ಆಗಸ್ಟ್ 5ರಂದು ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ದುಲ್ಕರ್ ಸಲ್ಮಾನ್ ಮುಖ್ಯಭೂಮಿಕೆಯಲ್ಲಿದ್ದಾರೆ.

ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ಅಬುಧಾಬಿಗೆ ತೆರಳಿದ್ದರು. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದರು.