ನಟಿ ರಶ್ಮಿಕಾ ಮಂದಣ್ಣ ಅವರು ಎಲ್ಲಾ ಭಾಷೆಗಳಲ್ಲೂ ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ತೆಲುಗು, ತಮಿಳು ಹಾಗೂ ಬಾಲಿವುಡ್ನಲ್ಲಿ ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಈಗ ರಶ್ಮಿಕಾ ಮಂದಣ್ಣ ಅವರು ಮತ್ತೋರ್ವ ಸ್ಟಾರ್ ನಟನ ಜತೆ ತೆರೆ ಹಂಚಿಕೊಳ್ಳಲು ರೆಡಿ ಆಗಿದ್ದಾರೆ ಎಂದು ವರದಿ ಆಗಿದೆ.
ರಶ್ಮಿಕಾ ಮಂದಣ್ಣ ಅವರು ಬಾಲಿವುಡ್ನಲ್ಲಿ ‘ಗುಡ್ಬೈ’ ಹಾಗೂ ‘ಮಿಷನ್ ಮಜ್ನು’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗಳು ರಿಲೀಸ್ ಆಗುವುದಕ್ಕೂ ಮೊದಲೇ ಅವರಿಗೆ ಸಾಕಷ್ಟು ಆಫರ್ಗಳು ಬರುತ್ತಿವೆ. ಈಗ ಅವರ ತೆಕ್ಕೆಗೆ ಮತ್ತೊಂದು ದೊಡ್ಡ ಆಫರ್ ಸಿಕ್ಕಿದೆ.
ಟೈಗರ್ ಶ್ರಾಫರ್ ಹಾಗೂ ನಿರ್ದೇಶಕ ಶಶಾಂಕ್ ಖೈತಾನ್ ಹೊಸ ಚಿತ್ರಕ್ಕಾಗಿ ಒಂದಾಗುತ್ತಿದ್ದಾರೆ. ಈ ಸಿನಿಮಾ ಸಖತ್ ಆ್ಯಕ್ಷನ್ನಿಂದ ಕೂಡಿರಲಿದೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ ಎಂದು ಪಿಂಕ್ವಿಲ್ಲಾ ವರದಿ ಮಾಡಿದೆ. ಈ ಚಿತ್ರ ಸೆಪ್ಟೆಂಬರ್ ತಿಂಗಳಲ್ಲಿ ಸೆಟ್ಟೇರಲಿದೆ.
ಟೈಗರ್ ಶ್ರಾಫ್ ಬಾಲಿವುಡ್ನಲ್ಲಿ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಸಾಕಷ್ಟು ಬೇಡಿಕೆ ಇದೆ. ಅವರ ಜತೆ ನಟಿಸೋಕೆ ರಶ್ಮಿಕಾ ಕೂಡ ಎಗ್ಸೈಟ್ ಆಗಿದ್ದಾರೆ ಎಂದು ವರದಿ ಆಗಿದೆ.
ರಶ್ಮಿಕಾ ಮಂದಣ್ಣ ಅವರು ಸಾಲು ಸಾಲು ಪ್ರಾಜೆಕ್ಟ್ಗಳಲ್ಲಿ ನಟಿಸುತ್ತಿದ್ದಾರೆ. ಟಾಲಿವುಡ್, ಮಾಲಿವುಡ್, ಕಾಲಿವುಡ್ ಹಾಗೂ ಬಾಲಿವುಡ್ನಲ್ಲಿ ಬ್ಯುಸಿ ಇರುವ ಏಕೈಕ ಕನ್ನಡದ ನಟಿ ಎಂದರೆ ಅದು ರಶ್ಮಿಕಾ.