ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಹಳದಿ ಶಾಸ್ತ್ರದ ಕಲರ್​ಫುಲ್ ಫೋಟೋ ಗ್ಯಾಲರಿ

Updated on: Mar 16, 2026 | 10:45 PM

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಅವರ ಮದುವೆ ಕೆಲವು ದಿನಗಳ ಹಿಂದೆ ಅದ್ದೂರಿಯಾಗಿ ನಡೆಯಿತು. ಮದುವೆಯ ಫೋಟೋಗಳು ಒಂದೊಂದಾಗಿಯೇ ಹೊರಬರುತ್ತಿವೆ. ಈ ಫೋಟೋಗಳನ್ನು ನೋಡಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಹಳದಿ ಶಾಸ್ತ್ರದ ಕಲರ್​ಫುಲ್ ಫೋಟೋಗಳು ಲಭ್ಯವಾಗಿವೆ. ಗ್ಯಾಲರಿ ಇಲ್ಲಿದೆ ನೋಡಿ..

1 / 5
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆಯಲ್ಲಿ ಕುಟುಂಬದ ಸದಸ್ಯರು ಮತ್ತು ಆಪ್ತರು ಮಾತ್ರ ಭಾಗಿ ಆಗಿದ್ದರು. ಈಗ ಫೋಟೋಗಳ ಮೂಲಕ ಅಭಿಮಾನಿಗಳಿಗೆ ಮದುವೆ ಸಂಭ್ರಮದ ಝಲಕ್ ಕಾಣಿಸಿದೆ.

2 / 5
ರಾಜಸ್ಥಾನದ ಉದಯಪುರದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಮದುವೆ ಮಾಡಿಕೊಂಡರು. ಬಹಳ ಸಂಭ್ರಮದಿಂದ ಹಳದಿ ಶಾಸ್ತ್ರ ಮಾಡಲಾಗಿತ್ತು. ಈ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.

3 / 5
ಹಲವು ವರ್ಷಗಳ ಕಾಲ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಸಾರ್ವಜನಿಕವಾಗಿ ಅವರು ಒಪ್ಪಿಕೊಂಡಿರಲಿಲ್ಲ. ಕೊನೆಗೂ ಅವರ ಪ್ರೀತಿಗೆ ಮದುವೆಗೆ ಮುದ್ರೆ ಬಿದ್ದಿದೆ.

4 / 5
ಇದೇ ಮೊದಲ ಬಾರಿಗೆ ಹಳದಿ ಶಾಸ್ತ್ರದ ಫೋಟೋಗಳನ್ನು ಈ ಜೋಡಿ ಹಂಚಿಕೊಂಡಿದೆ. ಮದುವೆಯಲ್ಲಿ ಹಾಜರಿದ್ದ ಕುಟುಂಬದ ಸದಸ್ಯರು ಮತ್ತು ಆಪ್ತರು ಸಂಭ್ರಮಿಸಿದ ಕ್ಷಣಗಳು ಈ ಫೋಟೋದಲ್ಲಿ ಸೆರೆಯಾಗಿವೆ.

5 / 5
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ಮದುವೆಯ ಈ ಫೋಟೋಗಳಿಗೆ ಅಭಿಮಾನಿಗಳಿಂದ ಲಕ್ಷಾಂತರ ಲೈಕ್ಸ್ ಸಿಗುತ್ತಿವೆ. ಕಮೆಂಟ್​ಗಳ ಮೂಲಕ ಜನರು ಈ ದಂಪತಿಗೆ ಅಭಿನಂದನೆ ತಿಳಿಸುತ್ತಿದ್ದಾರೆ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us