- Kannada News Photo gallery Ravichandran Ashwin Creates new record becomes 1st bowler to complete 100 wickets in World Test Championship
R Ashwin: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 100 ವಿಕೆಟ್: ಆರ್. ಅಶ್ವಿನ್ ನೂತನ ದಾಖಲೆ
IND vs SL: 2ನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್ ನಲ್ಲಿ 4 ವಿಕೆಟ್ ಕಬಳಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ 100 ವಿಕೆಟ್ ಪಡೆದ ಮೊದಲಿಗ ಎಂಬ ದಾಖಲೆ ಆರ್. ಅಶ್ವಿನ್ ಬರೆದರು.
Updated on:Mar 15, 2022 | 8:14 AM

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಪಿಲ್ ದೇವ್ ಅವರ ದಾಖಲೆ ಮುರಿದಿದ್ದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲೂ ವಿಶೇಷ ಸಾಧನೆ ಗೈದಿದ್ದಾರೆ.

ಎರಡನೇ ಇನ್ನಿಂಗ್ಸ್ನಲ್ಲಿ ಶ್ರೀಲಂಕಾದ ಬ್ಯಾಟರ್ ಧನಂಜಯ ಡಿ ಸಿಲ್ವಾರನ್ನ 4ರನ್ಗೆ ಔಟ್ ಮಾಡಿದ ಬಳಿಕ ಅಶ್ವಿನ್, ದಕ್ಷಿಣ ಆಫ್ರಿಕಾದ ಮಾಜಿ ವೇಗದ ಬೌಲರ್ ಡೇಲ್ ಸ್ಟೇನ್ರ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನ ಮುರಿದರು. ಅಲ್ಲದೆ ಟೆಸ್ಟ್ ಕ್ರಿಕೆಟ್ನಲ್ಲಿ 440ನೇ ವಿಕೆಟ್ ಪಡೆದ ಸಾಧನೆಯೊಂದಿಗೆ, ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಜಿಗಿದರು.

ಇದರ ಜೊತೆಗೆ 2ನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್ ನಲ್ಲಿ 4 ವಿಕೆಟ್ ಕಬಳಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ 100 ವಿಕೆಟ್ ಪಡೆದ ಮೊದಲಿಗ ಎಂಬ ದಾಖಲೆ ಬರೆದರು. ಚಿನ್ನಸ್ವಾಮಿ ಕ್ರೀಡಾಂಗಣದ ಮೊದಲ ಇನಿಂಗ್ಸ್ 2 ವಿಕೆಟ್ ಪಡೆದಿದ್ದ ಅಶ್ವಿನ್ ಎರಡನೇ ಇನಿಂಗ್ಸ್ ನಲ್ಲಿ 4 ವಿಕೆಟ್ ಪಡೆದರು. ಈ ಮೂಲಕ ಕೇವಲ 20 ಟೆಸ್ಟ್ ಗಳಲ್ಲಿ ಈ ಸಾಧನೆ ಮಾಡಿದರು.

ಅಶ್ವಿನ್ ನಂತರ, ಆಸ್ಟ್ರೇಲಿಯಾದ ನಾಯಕ ಮತ್ತು ವಿಶ್ವದ ನಂಬರ್ ಒನ್ ಟೆಸ್ಟ್ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಎರಡನೇ ಸ್ಥಾನದಲ್ಲಿದ್ದಾರೆ. ಕಮ್ಮಿನ್ಸ್ 20 ಪಂದ್ಯಗಳಲ್ಲಿ ಈ 93 ವಿಕೆಟ್ ಪಡೆದಿದ್ದಾರೆ. ಮೂರನೇ ಸ್ಥಾನದಲ್ಲಿ ಇಂಗ್ಲೆಂಡ್ನ ಅನುಭವಿ ವೇಗಿ ಸ್ಟುವರ್ಟ್ ಬ್ರಾಡ್ 21 ಪಂದ್ಯಗಳಲ್ಲಿ 83 ವಿಕೆಟ್ ಪಡೆದಿದ್ದಾರೆ.
Published On - 7:32 am, Tue, 15 March 22
