ರಿಯಲ್ ಮಿ ಸಂಸ್ಥೆ ಮೊನ್ನೆಯಷ್ಟೆ ಭಾರತದಲ್ಲಿ ಹೊಸದಾಗಿ ಬಿಡುಗಡೆ ಮಾಡಿರುವ ರಿಯಲ್ ಮಿ 9i ಸ್ಮಾರ್ಟ್ಫೋನ್ ಅಧಿಕೃತ ಮಾರಾಟವನ್ನು ಇದೇ ಜನವರಿ 25 ಕ್ಕೆ ನಿಗದಿಪಡಿಸಲಾಗಿದೆ. ಆದರೆ ಮೊದಲ ಮಾರಾಟಕ್ಕೆ ಮುಂಚಿತವಾಗಿ, ಕಂಪನಿಯು ಆರಂಭಿಕ ಮಾರಾಟವನ್ನು ಇಂದು ಮಧ್ಯಾಹ್ನ 12 ಗಂಟೆಯಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಪ್ರಾರಂಭಿಸಿದೆ.
ಈ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 680 SoC ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ ಬಜೆಟ್ ಬೆಲೆಯಿಂದ ಕೂಡಿದೆ.
ರಿಯಲ್ ಮಿ 9i ಸ್ಮಾರ್ಟ್ಫೋನ್ ಭಾರತದಲ್ಲಿ ಒಟ್ಟು ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಇದರ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯಕ್ಕೆ 13,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 6GB RAM ಮತ್ತು 128GB ಇಂಟರ್ ಸ್ಟೋರೇಜ್ಗೆ 15,999 ರೂ. ಇದೆ. ಇದು ನೀಲಿ ಮತ್ತು ಕಪ್ಪು ಬಣ್ಣಗಳಲ್ಲಿ ಮಾರಾಟ ಆಗುತ್ತಿದೆ.
ರಿಯಲ್ ಮಿ 9i ಸ್ಮಾರ್ಟ್ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಪುಲ್ ಹೆಚ್ಡಿ + IPS LCD ಡಿಸ್ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 680 SoC ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.
ಇನ್ನು ಈ ಸ್ಮಾರ್ಟ್ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಮಾತ್ರ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB-C ಪೋರ್ಟ್, ವೈಫೈ, ಬ್ಲೂಟೂತ್, GPS ಮತ್ತು 3.5mm ಹೆಡ್ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇತ್ತೀಚೆಗಷ್ಟೆ ಈ ಫೋನ್ ವಿಯೆಟ್ನಾಂನಲ್ಲಿ ರಿಲೀಸ್ ಆಗಿತ್ತು. ಇಲ್ಲಿ ಈ ಫೋನಿನ ಬೆಲೆ VND 6,290,000 ಆಗಿದೆ.
Published On - 12:48 pm, Sat, 22 January 22