AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Realme 9 4G: ಎರಡೇ ದಿನ ಬಾಕಿ: ಭಾರತಕ್ಕೆ ಅಪ್ಪಳಿಸಲಿದೆ 108MP ಕ್ಯಾಮೆರಾದ ಹೊಸ ಸ್ಮಾರ್ಟ್​​ಫೋನ್

108MP Camera Phone: ರಿಯಲ್ ಮಿ 9 ಫೋನಿನ ಮುಖ್ಯ ಹೈಲೇಟ್ ಇದರ ಕ್ಯಾಮೆರಾ ಆಗಿದೆ. ಇದು 108 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾದೊಂದಿಗೆ ಬರುತ್ತದೆ. ಮುಂಭಾಗದ ಕ್ಯಾಮೆರಾದ ವಿವರಗಳನ್ನು ಬಹಿರಂಗ ಪಡಿಸಿಲ್ಲ.

Vinay Bhat
|

Updated on:Apr 05, 2022 | 2:47 PM

Share
ಬಿಡುಗಡೆಗೂ ಮುನ್ನವೇ ಟೆಕ್ ಮಾರುಕಟ್ಟೆಯಲ್ಲಿ ಭರ್ಜರಿ ಸುದ್ದಿಯಲ್ಲಿದ್ದ ಬಹುನಿರೀಕ್ಷಿತ ರಿಯಲ್ ಮಿ 9 4G ಸ್ಮಾರ್ಟ್ ಫೋನ್ ಇದೀಗ ಭಾರತಕ್ಕೆ ಕಾಲಿಟ್ಟಿದೆ. ಇಂದು ಈ ಫೋನ್ ಭಾರತದಲ್ಲಿ ಅನಾವರಣಗೊಂಡಿದೆ. ತನ್ನ ಆಕರ್ಷಕ ಕ್ಯಾಮೆರಾ ಮೂಲಕವೇ ಜನರ ನಿದ್ದೆ ಕದ್ದಿದ್ದ ಈ ಫೋನ್ ಬೆಲೆ ಕೇವಲ 20,000 ರೂ. ಗಿಂತ ಕಡಿಮೆ ಇದೆ ಎಂದರೆ ನಂಬಲೇ ಬೇಕು. ಹಾಗಾದ್ರೆ ಇದರ ಬೆಲೆ ಎಷ್ಟು?, ವಿಶೇಷತೆ ಏನು ಎಂಬುದನ್ನು ನೋಡೋಣ.

1 / 5
ರಿಯಲ್ಮಿ 9 4G ಸ್ಮಾರ್ಟ್ ಫೋನ್ 24000 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ HD + ಡಿಸ್ ಪ್ಲೇ ಹೊಂದಿದೆ. ಈ ಡಿಸ್ ಪ್ಲೇ 90Hz ರಿಫ್ರೆಶ್ ರೇಟ್ನಿಂದ ಕೂಡಿದೆ. ಈ ಸ್ಮಾರ್ಟ್ ಫೋನ್ ಕ್ವಾಲ್ಕಂ ಸ್ನಾಪ್ ಡ್ರಾಗನ್ 680 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ರಿಯಲ್ ಮಿ UI 3.0 ಆವೃತ್ತಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಮೈಕ್ರೋ SD ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

2 / 5
ರಿಯಲ್ ಮಿ 9 ಫೋನಿನ ಪ್ರಮುಖ ಹೈಲೇಟ್ ಕ್ಯಾಮೆರಾ ಆಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಫಿಕ್ಸೆಲ್ ನಿಂದ ಕೂಡಿದೆ. ಎರಡನೇ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ ಕ್ರಮವಾಗಿ ಸೂಪರ್ ವೈಡ್ 119 ಡಿಗ್ರಿ ಲೆನ್ಸ್ ಮತ್ತು 4cm ಮಾಕ್ರೊ ಲೆನ್ಸ್ ಸಹಾಯ ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

3 / 5
ರಿಯಲ್ ಮಿ 9 ಸ್ಮಾರ್ಟ್ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.  33W ವೇಗದ ಚಾರ್ಜಿಂಗ್ ಬೆಂಬಲ ಕೂಡ ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi (2.4 GHz), ಬ್ಲೂಟೂತ್ v5, 3.5mm ಹೆಡ್ ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ.

4 / 5
ಭಾರತದಲ್ಲಿ ರಿಯಲ್ ಮಿ 9 ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ ಬೇಸ್ ಮಾಡೆಲ್ 6 GB + 128 GB ಸ್ಟೋರೇಜ್ ಮಾದರಿಗೆ 17,999 ರೂ. ಬೆಲೆ ಹೊಂದಿದೆ. ಹಾಗೆಯೆ 8 GB + 128 GB ರೂಪಾಂತರದ ಬೆಲೆ 18,999ರೂ.ಆಗಿದೆ. ಆಫರ್ ನಲ್ಲಿ 2,000 ರೂ. ಗಳ ರಿಯಾಯಿತಿ ಕೂಡ ಪಡೆಯಬಹುದು. ಈ ಸ್ಮಾರ್ಟ್ ಫೋನ್ ಏಪ್ರಿಲ್ 12 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್ ಕಾರ್ಟ್ ನಲ್ಲಿ ಫಸ್ಟ್ ಸೇಲ್ ನಡೆಯಲಿದೆ.

5 / 5

Published On - 2:26 pm, Tue, 5 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ