- Kannada News Photo gallery Redmi 10 smartphone with an impressive 6000mAh battery has been launched in India
Redmi 10 ಬಿಡುಗಡೆ: ಕೇವಲ 10,000 ರೂ. ಗೆ 50MP ಕ್ಯಾಮೆರಾ, 6000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ
Redmi 10: ಶವೋಮಿ ಇದೀಗ ದೇಶದಲ್ಲಿ ಹೊಸ ರೆಡ್ಮಿ 10 (Redmi 10) ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಅತ್ಯಂತ ಬಲಿಷ್ಠವಾದ ದೀರ್ಘ ಬಾಳಿಕೆ ಬರುವ 6,000mAh ಸಾಮರ್ಥ್ಯದ ಬ್ಯಾಟರಿ ಈ ಫೋನ್ಗೆ ನೀಡಲಾಗಿದೆ.
Updated on:Mar 18, 2022 | 8:15 AM

ಶವೋಮಿ ಇದೀಗ ದೇಶದಲ್ಲಿ ಹೊಸ ರೆಡ್ಮಿ 10 (Redmi 10) ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಅತ್ಯಂತ ಬಲಿಷ್ಠವಾದ ದೀರ್ಘ ಬಾಳಿಕೆ ಬರುವ 6,000mAh ಸಾಮರ್ಥ್ಯದ ಬ್ಯಾಟರಿ ಈ ಫೋನ್ಗೆ ನೀಡಲಾಗಿದೆ. ಅಲ್ಲದೆ ವಾಟರ್‌ಡ್ರಾಪ್-ಶೈಲಿಯ ಡಿಸ್‌ಪ್ಲೇ, ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿರುವ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ನಿಂದ ಕೂಡಿದೆ.

ಈ ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI 13 ಜೊತೆಗೆ ರನ್ ಆಗುತ್ತದೆ.

ರೆಡ್ಮಿ 10 ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಕ್ಯಾಮರಾ ಸೆಟಪ್ ಅನ್ನು ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಜೋಡಿಸಲಾಗಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಒಳಗೊಂಡಿದೆ.

ಧೀರ್ಘ ಸಮಯ ಬಾಳಿಕೆ ಬರುವ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದಕ್ಕೆ ಪೂರಕವಾಗಿ ಆದಷ್ಟು ಬೇಗ ಚಾರ್ಜ್ ಆಗುವಂತಹ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರ ಬಂಡಲ್ ಚಾರ್ಜರ್ 10W ವರೆಗೆ ಚಾರ್ಜ್ ಮಾಡುವುದನ್ನು ಮಾತ್ರ ಬೆಂಬಲಿಸುತ್ತದೆ.

ಬೆಲೆ ಎಷ್ಟು?: 4GB RAM ಮತ್ತು 64GB ಸ್ಟೋರೇಜ್ ಆಯ್ಕೆಗೆ ಕೇವಲ 10,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 6GB RAM ಮತ್ತು 128GB ಮಾದರಿಯ ಆಯ್ಕೆಗೆ 12,999 ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಮಾರ್ಚ್ 24 ರಂದು ಮಧ್ಯಾಹ್ನ 12 ಗಂಟೆಯಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್, ಎಂಐ.ಕಾಮ್, ಎಂಐ ಹೋಮ್ ಮೂಲಕ ಮಾರಾಟ ಕಾಣಲಿದೆ.
Published On - 7:49 am, Fri, 18 March 22









