- Kannada News Photo gallery Redmi A1+ budget smartphone is now available for purchase in India Check price and specs
Redmi A1+: ಬಜೆಟ್ ಪ್ರಿಯರು ಫಿದಾ ಆಗಿರುವ 6,999 ರೂಪಾಯಿ ರೆಡ್ಮಿ A1+ ಈಗ ಖರೀದಿಗೆ ಲಭ್ಯ
ಕಳೆದ ವಾರ ರೆಡ್ಮಿ ಎ1+ (Redmi A1+) ಸ್ಮಾರ್ಟ್‌ಫೋನ್ ಬಿಡುಗಡೆ ಆಗಿತ್ತು. ಬಜೆಟ್ ಬೆಲೆಯ ಈ ಬಂಪರ್ ಫೋನ್ ಈಗ ಖರೀದಿಗೆ ಸಿಗುತ್ತಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ? ಎಂಬುದನ್ನು ನೋಡೋಣ.
Updated on: Oct 18, 2022 | 6:21 AM

ಶವೋಮಿ ಕಂಪನಿ ಕಳೆದ ಸೆಪ್ಟೆಂಬರ್ನಲ್ಲಿ ರೆಡ್ಮಿ ಎ1 (Redmi A1) ಎಂಬ ಹೊಸ ಫೋನನ್ನು ಭಾರತದಲ್ಲಿ ಅನಾವರಣ ಮಾಡಿತ್ತು. ಬಜೆಟ್ ಬೆಲೆಯ ಈ ಫೋನಿಗೆ ಈಗಕೂಡ ಬೇಡಿಕೆ ಇದೆ. ಹೀಗಿರುವಾಗ ಕಳೆದ ವಾರ ಈ ಸರಣಿಯ ಮುಂದುವರೆದ ಭಾಗವಾಗಿ ರೆಡ್ಮಿ ಎ1+ (Redmi A1+) ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿತ್ತು. ಬಜೆಟ್ ಬೆಲೆಯ ಈ ಬಂಪರ್ ಫೋನ್ ಈಗ ಖರೀದಿಗೆ ಸಿಗುತ್ತಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ? ಎಂಬುದನ್ನು ನೋಡೋಣ.

ರೆಡ್ಮಿ A1+ ಸ್ಮಾರ್ಟ್‌ಫೋನ್ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ 2GB RAM + 32GB ಸ್ಟೋರೇಜ್ಗೆ ಕೇವಲ 6,999 ರೂ. ಮತ್ತು 3GB RAM + 32GB ಸ್ಟೋರೇಜ್ ಆಯ್ಕೆಗೆ 7,999 ರೂ. ನಿಗದಿ ಮಾಡಲಾಗಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಮತ್ತು ಎಂಐ ಅಧಿಕೃತ ವೆಬ್ಸೈಟ್ನಲ್ಲಿ ಸೇಲ್ ಕಾಣುತ್ತಿದೆ.

ಈ ಸ್ಮಾರ್ಟ್‌ಫೋನ್ 1600*720 ಪಿಕ್ಸೆಲ್ ರೆಸಲೂಶನ್ ಸಾಮರ್ಥ್ಯದ 6.52 ಇಂಚಿನ ಹೆಚ್‌ಡಿ ಪ್ಲಸ್ ಡಾಟ್ ಡ್ರಾಪ್ ಡಿಸ್‌ಪ್ಲೇ ಹೊಂದಿದೆ. ಡಾರ್ಕ್ ಮೋಡ್ ಮತ್ತು ನೈಟ್ ಮೋಡ್ ಆಯ್ಕೆ ನೀಡಲಾಗಿದೆ.

ಮೀಡಿಯಾಟೆಕ್ ಹೀಲಿಯೊ A22 ಪ್ರೊಸೆಸರ್ ಅಳವಡಿಸಲಾಗಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಬೆಂಬಲವನ್ನು ಪಡೆದುಕೊಂಡಿದೆ. 1TB ವರೆಗೆ ಮೈಕ್ರೊ ಎಸ್ಡಿ ಕಾರ್ಡ್ ಅನ್ನು ವಿಸ್ತರಿಸಬಹುದಾಗಿದೆ.

ಈ ಸ್ಮಾರ್ಟ್ಫೋನ್ನಲ್ಲಿ 8 ಮೆಗಾಫಿಕ್ಸೆಲ್ನ ಡ್ಯುಯೆಲ್ ಕ್ಯಾಮೆರಾ ಸೆಟ್‌ಅಪ್ ಇದೆ. ಜೊತೆಗೆ LED ಫ್ಲ್ಯಾಸ್ ಕೂಡ ಇದೆ. ಮುಂಭಾಗ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ದೀರ್ಘ ಸಮಯ ಬಾಳಿಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, 10W ಸಾಮಾನ್ಯ ವೇಗದ ಚಾರ್ಜರ್ನೊಂದಿಗೆ ಬರುತ್ತದೆ. 30 ದಿನಗಳ ಸ್ಟ್ಯಾಂಡ್ ಬೈ ಟೈಮ್ ಎಂದು ಕಂಪನಿ ಹೇಳಿಕೊಂಡಿದೆ.

ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿಲ್ಲ. ಬದಲಾಗಿ 4G LTE, ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್ v5.0, ಹೆಡ್ಫೋನ್ ಜ್ಯಾಕ್, GPS ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಎರಡು ಸಿಮ್ ಅನ್ನು ಸಪೋರ್ಟ್ ಮಾಡುತ್ತದೆ. ವಿಶೇಷವಾಗಿ ಹಿಂಭಾಗದಲ್ಲಿ ಫಿಂಗರ್ಪ್ರಿಂಟ್ ಸ್ಕ್ಯಾನರ್ ನೀಡಲಾಗಿದೆ.









