ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಹಳೆಯ ಕಹಿ ನೆನಪುಗಳಿಂದ ಹೊರಬಂದು ಪ್ರವಾಸ, ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.
ಗೆಳೆಯರೊಟ್ಟಿಗೆ ಪ್ರವಾಸಕ್ಕೆ ತೆರಳಿರುವ ರಿಯಾ ಚಕ್ರವರ್ತಿ ತಮ್ಮ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಸುಶಾಂತ್ ಸಿಂಗ್ ಸಾವಿನ ಬಳಿಕ ನಡೆದ ಬೆಳವಣಿಗೆಗಳಿಂದ ತೀವ್ರವಾಗಿ ಕುಗ್ಗ ಹೋಗಿದ್ದ ರಿಯಾ ಇದೀಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ.
ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ, ಬಳಿಕ ಜಾಮೀನಿನ ಮೇಲೆ ಹೊರಬಂದರು.
ಇದೀಗ ರಿಯಾ ಚಕ್ರವರ್ತಿ ರಿಯಾಲಿಟಿ ಶೋಗಳಲ್ಲಿ, ಕೆಲ ಸಿನಿಮಾಗಳಲ್ಲಿ ಸಹ ಕಾಣಿಸಿಕೊಳ್ಳುತ್ತಿದ್ದಾರೆ.