ದೇಶದಲ್ಲಿ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಯಾವ ರಾಜ್ಯದ ಮುಖ್ಯಮಂತ್ರಿ ಯಾವ ಸ್ಥಾನವನ್ನು ಹೊಂದಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಯಾವ ಸ್ಥಾನವನ್ನು ಹೊಂದಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ನ ಹೊಸ ವರದಿಯ ಪ್ರಕಾರ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಟ್ಟು 8 ಕೋಟಿ ರೂ. ಆಸ್ತಿ ಹೊಂದಿದ್ದಾರೆ ಮತ್ತು 30 ಮುಖ್ಯಮಂತ್ರಿಗಳ ಪೈಕಿ 13 ನೇ ಶ್ರೀಮಂತರಾಗಿದ್ದಾರೆ.
ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜಗನ್ ಮೋಹನ್ ರೆಡ್ಡಿ ಒಟ್ಟು 510 ಕೋಟಿ ರೂ. ಆಸ್ತಿ ಹೊಂದಿದ್ದಾರೆ,
30 ಮುಖ್ಯಮಂತ್ರಿಗಳಲ್ಲಿ 29 ಮಂದಿ ಕೋಟ್ಯಾಧಿಪತಿಗಳು. ಸಿಎಂ ಬೊಮ್ಮಾಯಿ ಒಟ್ಟು 30 ರಲ್ಲಿ 13 ನೇ ಸ್ಥಾನದಲ್ಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಟ್ಟು 8 ಕೋಟಿ ರೂ. ಆಸ್ತಿ ಹೊಂದಿದ್ದಾರೆ
ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ 15 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದು. ಕೊನೆಯ ಸ್ಥಾನದಲ್ಲಿ ನಿಂತಿದ್ದಾರೆ.
ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಹರಿಯಾಣ ಸಿಎಂ ಮನೋಹರ್ ಲಾಲ್ ಅವರು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನಂತರ 1 ಕೋಟಿಗೂ ಹೆಚ್ಚು ಮೌಲ್ಯದ ಕಡಿಮೆ ಆಸ್ತಿ ಹೊಂದಿದ್ದಾರೆ ಎಂದು ಎಡಿಆರ್ ಹೇಳಿದೆ.
ಎಡಿಆರ್ 28 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ (ಯುಟಿಗಳು) ದೆಹಲಿ ಮತ್ತು ಪುದುಚೇರಿ ಸಿಎಂಗಳನ್ನು ವಿಶ್ಲೇಷಿಸಿದೆ ಮತ್ತು ಎಲ್ಲಾ 30 ಮುಖ್ಯಮಂತ್ರಿಗಳ ಸ್ವಯಂ-ಪ್ರಮಾಣ ಚುನಾವಣಾ ಅಫಿಡವಿಟ್‌ಗಳನ್ನು ಪರಿಶೀಲಿಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಇಲ್ಲ. ಈ ಕಾರಣಕ್ಕೆ ಇಲ್ಲಿ ಆ ರಾಜ್ಯದ ವರದಿ ನೀಡಿಲ್ಲ.
ಒಡಿಶಾ ಸಿಎಂ ನವೀನ್ ಪಟ್ನಾಯಕ್ 63 ಕೋಟಿ ರೂ. ಆಸ್ತಿಯನ್ನು ಹೊಂದಿದ್ದಾರೆ ಅವರು ಮೂರನೇ ಶ್ರೀಮಂತರಾಗಿದ್ದಾರೆ.
ಅರುಣಾಚಲ ಪ್ರದೇಶ ಸಿಎಂ ಪೆಮಾ ಖಂಡು 163 ಕೋಟಿ ರೂ. ಆಸ್ತಿಯನ್ನು ಹೊಂದಿದ್ದಾರೆ. ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ನಂತರ ಎರಡನೇ ಸ್ಥಾನ ಪಡೆದಿದ್ದಾರೆ
43%ದಷ್ಟು ಮುಖ್ಯಮಂತ್ರಿಗಳು ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ ಎಂದು ಎಡಿಆರ್ ವರದಿಯಲ್ಲಿ ಹೇಳಲಾಗಿದೆ.
Published On - 4:26 pm, Thu, 13 April 23